Advertisement

ಅವ್ಯವಹಾರದಲ್ಲಿ ರಾಜಕಾರಣಿ, ಅಧಿಕಾರಿಗಳು ಶಾಮೀಲು

12:30 PM Oct 26, 2018 | |

ಬೆಂಗಳೂರು: ಬಿಬಿಎಂಪಿಯ ಮೂರು ವಲಯಗಳಲ್ಲಿ 2008ರಿಂದ 2012ರವರೆಗೆ 1600 ಕೋಟಿ ರೂ. ಮೊತ್ತದ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಸಮಿತಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ವರದಿ ಸಲ್ಲಿಸಿದೆ.

Advertisement

ಗಾಂಧೀನಗರ, ರಾಜರಾಜೇಶ್ವರಿ ನಗರ ಹಾಗೂ ಮಲ್ಲೇಶ್ವರ ವಲಯಗಳಲ್ಲಿ ಕಾಮಗಾರಿಗಳಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸಮಿತಿ ವರದಿ ನೀಡಿದೆ. ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್‌ ಹಾಗೂ ಸಿವಿಲ್‌ ಪ್ರಕರಣ ದಾಖಲಿಸುವಂತೆಯೂ ಶಿಫಾರಸು ಮಾಡಿದೆ.

ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹಾಗೂ ಬಿಜೆಪಿಯ ಕೆಲವು ಬಿಬಿಎಂಪಿ ಸದಸ್ಯರ ಮೇಲಿನ ಆರೋಪದ ಬಗ್ಗೆಯೂ ವರದಿಯಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುರುವಾರ  ತನಿಖಾ ವರದಿಯನ್ನು ಸಲ್ಲಿಸಿದ ನ್ಯಾ. ನಾಗಮೋಹನ್‌ದಾಸ್‌, ಎರಡು ವರ್ಷ ಶ್ರಮವಹಿಸಿ ತನಿಖೆ ನಡೆಸಿ ವರದಿ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಅವ್ಯವಹಾರದಲ್ಲಿ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಪಾತ್ರ ಇದೆ. ಆದರೆ ಅವರ ಹೆಸರು ನಾನು ಬಹಿರಂಗಪಡಿಸಲಾಗದು ಎಂದು ಹೇಳಿದರು.

ಪ್ರಕರಣದ ತನಿಖೆ ನಡೆಸಲು ಸರ್ಕಾರ ಲೋಕಾಯುಕ್ತಕ್ಕೆ ವಹಿಸಿತ್ತು. ಆದರೆ, ಸಿಬ್ಬಂದಿ ಕೊರತೆ ಕಾರಣ ಲೋಕಾಯುಕ್ತ ತನಿಖೆಯಿಂದ ಹಿಂದೆ ಸರಿದಿತ್ತು. ನಂತರ ಸಿಐಡಿಗೂ ನೀಡಲಾಗಿತ್ತು. ಅವರೂ ತನಿಖೆ ನಡೆಸದಿದ್ದಾಗ ಸರ್ಕಾರ ಸಮಿತಿ ರಚನೆ ಮಾಡಿತ್ತು. 600 ಪುಟಗಳ ಎರಡು ಸಂಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next