Advertisement
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು, “ರಾಹುಲ್ ಗಾಂಧಿ ಮಾದಕ ದ್ರವ್ಯ ವ್ಯಸನಿ. ಡ್ರಗ್ ಪೆಡ್ಲರ್ ಕೂಡ ಆಗಿದ್ದಾರೆ. ಇದು ನಾನು ಸೃಷ್ಟಿ ಮಾಡಿದ್ದಲ್ಲ. ಹಲವು ವರದಿಗಳು ಇದನ್ನು ಪುಷ್ಟೀಕರಿಸಿವೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ನಾಯಕರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿ. ಮತ್ತಿತರ ಕಾಂಗ್ರೆಸ್ ನಾಯಕರು ನಳಿನ್ ವಿರುದ್ಧ ಹರಿಹಾಯ್ದಿದ್ದಾರೆ.
Related Articles
Advertisement
ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ!
ಡಿಕೆಶಿ ವಿರುದ್ಧ ಬಿಜೆಪಿ ದೂರುಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಸಂಬಂಧ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಪಶ್ಚಿಮ ವಿಭಾಗ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಟ್ವಿಟರ್ ಖಾತೆಯಲ್ಲಿ ನಳಿನ್‌ರನ್ನು ಕೆಟ್ಟ ಪದಗಳಿಂದ ನಿಂದಿಸಿ, ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ದೂರಲಾಗಿದೆ. ನಿನ್ನೆ ಮಾತನಾಡುವಾಗ ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆಯಿದೆ ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ.
– ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ