Advertisement

ರಾಜಕೀಯದಲ್ಲಿ ನಶೆ ಗಲಾಟೆ!

01:26 AM Oct 20, 2021 | Team Udayavani |

ಹುಬ್ಬಳ್ಳಿ: ಕಾಂಗ್ರೆಸ್‌ನ “ಮೋದಿ ಹೆಬ್ಬೆಟ್ಟು’ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮುಗಿಬಿದ್ದಿದೆ. ರಾಹುಲ್‌ಗೆ “ಮಾದಕ ಲೋಕದ ನಂಟು’ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿದ್ದು, ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

Advertisement

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, “ರಾಹುಲ್‌ ಗಾಂಧಿ ಮಾದಕ ದ್ರವ್ಯ ವ್ಯಸನಿ. ಡ್ರಗ್‌ ಪೆಡ್ಲರ್‌ ಕೂಡ ಆಗಿದ್ದಾರೆ. ಇದು ನಾನು ಸೃಷ್ಟಿ ಮಾಡಿದ್ದಲ್ಲ. ಹಲವು ವರದಿಗಳು ಇದನ್ನು ಪುಷ್ಟೀಕರಿಸಿವೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಧ್ವನಿಗೂಡಿಸಿರುವ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, “ರಾಹುಲ್‌ ಗಾಂಧಿ  ಡ್ರಗ್‌ ಪೆಡ್ಲರ್‌ ಅಲ್ಲ ಎಂದರೆ ಕಾಂಗ್ರೆಸ್‌ ನಾಯಕರು ಸರ್ಟಿಫಿಕೆಟ್‌ ತೋರಿಸಲಿ. ಅವರು ಮಾತನಾಡುವಾಗ ತೊದಲುವುದು, ಜೋಲಿ ಹೊಡೆಯುವುದನ್ನು ನೋಡಿದರೆ ಸಂಶಯ ಮೂಡುತ್ತದೆ ಎನಿಸುತ್ತಿದೆ’ ಎಂದಿದ್ದಾರೆ.

ನಿಮ್ಹಾನ್ಸ್‌ಗೆ ಸೇರಿಸಬೇಕು
ಬಿಜೆಪಿ ನಾಯಕರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿ. ಮತ್ತಿತರ ಕಾಂಗ್ರೆಸ್‌ ನಾಯಕರು ನಳಿನ್‌ ವಿರುದ್ಧ ಹರಿಹಾಯ್ದಿದ್ದಾರೆ.

ಸಿಂದಗಿ ಪ್ರಚಾರದ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, “ನಳಿನ್‌ಗೆ ಹುಚ್ಚುಹಿಡಿದಿದೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು’ ಎಂದು ಕಿಡಿಕಾರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Advertisement

ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಡಿಕೆಶಿ ವಿರುದ್ಧ ಬಿಜೆಪಿ ದೂರು
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಬಗ್ಗೆ ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ ಸಂಬಂಧ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕೆಪಿಸಿಸಿ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಪಶ್ಚಿಮ ವಿಭಾಗ ಸಿಇಎನ್‌ ಠಾಣೆಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಟ್ವಿಟರ್‌ ಖಾತೆಯಲ್ಲಿ ನಳಿನ್‌ರನ್ನು ಕೆಟ್ಟ ಪದಗಳಿಂದ ನಿಂದಿಸಿ, ಆಕ್ಷೇಪಾರ್ಹ ಪೋಸ್ಟ್‌ ಮಾಡಲಾಗಿದೆ ಎಂದು ದೂರಲಾಗಿದೆ.

ನಿನ್ನೆ ಮಾತನಾಡುವಾಗ ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆಯಿದೆ ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್‌ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ.
– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

 

Advertisement

Udayavani is now on Telegram. Click here to join our channel and stay updated with the latest news.

Next