Advertisement
ತಿಹಾರ್ ಜೈಲೇ ಶಾಶ್ವತ
2018ರಲ್ಲಿ ಸರಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ. ರಮೇಶ್ ಜಾರಕಿಹೊಳಿಗೂ ಡಿ.ಕೆ.ಶಿವಕುಮಾರ್‌ಗೂ ವೈಷಮ್ಯ ಇತ್ತು. ನನಗೂ ಅವರಿಗೂ ಇರಲಿಲ್ಲ. ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕಾರಣಕ್ಕೆ ಕೈ ಹಾಕಿದ್ದು ಯಾಕೆ ಎಂದು ಪ್ರಶ್ನಿಸಿದ ಎಚ್‌ಡಿಕೆ, ಎಲ್ಲವನ್ನೂ ಮಾಡಿ ಹೊರಗೆ ನಾನು ಕುಮಾರಣ್ಣನ ಸರಕಾರ ಉಳಿಸೋಕೆ ಪ್ರಯತ್ನಪಟ್ಟೆ ಎಂದು ಮೊಸಳೆ ಕಣ್ಣೀರು ಹಾಕಿದರು ಎಂದು ವಾಗ್ಧಾಳಿ ನಡೆಸಿದರು.
Related Articles
ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗೆ ಶ್ರಮಿಸೋಣ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕು. ಈ ಮೂಲಕ ಮೈತ್ರಿ ಬಗ್ಗೆ ಇಡೀ ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದರು.
Advertisement
ಇನ್ನೆರಡು ತಿಂಗಳಲ್ಲಿ ಸರಕಾರ ಪತನ: ಯೋಗೇಶ್ವರ್ಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ಇನ್ನೆರಡು ತಿಂಗಳಲ್ಲಿ ಬೀಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು. ಪಟ್ಟಣದ ಎಲ್.ಎನ್. ಕಲ್ಯಾಣ ಮಂಟಪದಲ್ಲಿ ರವಿವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ನಾನೇ ಸೂಪರ್ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಿದ್ದಾರೆ. ಡಿಕೆ ಸಹೋದರರು ಕೇವಲ ಮಾತಿಗೆ ಸೀಮಿತವಾಗಿದ್ದಾರೆ. ಗ್ಯಾರಂಟಿ ಯೋಜನೆಗೆ ಸೀಮಿತವಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಸ್ವಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಿದೆ. ಈಗ ದೊಡ್ಡ ನಾಯಕರು ಕಮಲ-ದಳ ಮೈತ್ರಿ ಮಾಡಿದ್ದಾರೆ. ತಳಮಟ್ಟದ ಕಾರ್ಯಕರ್ತರೂ ಹೊಂದಾಣಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವಿಚಾರವಾಗಿ ಮಾತನಾಡಿದ ಯೋಗೇಶ್ವರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿಯಾಗಿದ್ದಾರೆ. ಬಿಜೆಪಿಗೆ ಬಂದಮೇಲೆ ಬಿಡಿಎ ಅಧ್ಯಕ್ಷ ಆದ್ರು, ಮಂತ್ರಿ ಆಗಿ ಪ್ರಬಲ ಖಾತೆ ಪಡೆದರು, ಅಧಿಕಾರ ಅನುಭವಿಸಿದರು. ಇವತ್ತು ಅಧಿಕಾರ ಇಲ್ಲ ಅಂತ ಹೀಗೆ ಮಾತನಾಡುತ್ತಾರೆ. ಒಂದು ವೇಳೆ ಪಕ್ಷದಿಂದ ಹೊರಹೋಗುವ ತೀರ್ಮಾನ ಮಾಡಿದರೆ ನಮ್ಮ ವಿರೋಧ ಇಲ್ಲ. ಸ್ವಾಗತಿಸುತ್ತೇವೆ ಎಂದರು. ಶಾಮನೂರು ಶಿವಶಂಕರಪ್ಪ ಅವರು ತಮ್ಮ ಅಭಿಪ್ರಾಯವನ್ನು ಧೈರ್ಯವಾಗಿ ಹೇಳಿದ್ದಾರೆ. ಇಲ್ಲಿ ಸಂಖ್ಯೆಗಿಂತ ಇಲಾಖೆಯಲ್ಲಿ ಯಾವ್ಯಾವ ಅ ಧಿಕಾರಿಗೆ ಯಾವ ಇಲಾಖೆ ಕೊಟ್ಟಿದ್ದಾರೆ ಎಂಬುದು ಮುಖ್ಯ. ಕೆಲಸಕ್ಕೆ ಬಾರದ ಜಾಗ ಕೊಟ್ಟು, ಇಂತಹ ಸಮುದಾಯಕ್ಕೆ ಇಷ್ಟು ಸಂಖ್ಯೆ ಕೊಟ್ಟಿದ್ದೇವೆ ಎಂದರೆ ಅದರಿಂದ ಏನು ಉಪಯೋಗ?
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಮೈತ್ರಿ ಮಾಡಿಕೊಂಡಿವೆ. ಮುಂದಿನ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜತೆಗೂಡಿ ಕೆಲಸ ಮಾಡ
ಬೇಕು. ತಮ್ಮಲ್ಲಿರುವ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದುಗೊತ್ತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘ ಟನೆ ಮಾಡಿ. ಯಾರಿಗೂ ಭಯಪಡುವ ಅಗತ್ಯವಿಲ್ಲ. ನಿಮ್ಮ ಜತೆಗೆ ನಾವಿದ್ದೇವೆ.
-ಸಿ.ಟಿ.ರವಿ, ಮಾಜಿ ಸಚಿವ