Advertisement

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

11:57 AM Oct 25, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಮೃತಪಟ್ಟವರ ಕುಟುಂಬದ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದರು.

Advertisement

ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಟ್ಟಡ ಕುಸಿತದ ಪ್ರಕರಣದಲ್ಲಿ 8 ಜನ ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು.

ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದು ದೂರಿದರು. ಕಾಂಗ್ರೆಸ್‌ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಬರುವ ರಸ್ತೆಯ ಎರಡೂ ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿಯಾಗಲಿ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್‌ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next