ಬೆಂಗಳೂರು ತೆರಿಗೆ ಹಂಚಿಕೆವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರೋಧಿಸಿ “ದೇಶ ವಿಭ ಜನೆ’ಯ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ಮಾತು ದಿನಕ್ಕೊಂದು ತಿರುವು ಪಡೆದುಕೊ ಳ್ಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಆಗಿರುವ ನಷ್ಟದ ವಿರುದ್ಧ ಫೆ. 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಫೆ.7 ರಂದು ರಾಜ್ಯದ 136 ಕಾಂಗ್ರೆಸ್ ಶಾಸಕರು ಮತ್ತು ಸಂಸದರು, ವಿಧಾನ ಪರಿಷತ್ ಸದಸ್ಯರು ದಿಲ್ಲಿಯಲ್ಲಿ
ವಿಧಾನಸೌಧದ ಎದುರು ಬಿಜೆಪಿ ಪ್ರತಿಹೋರಾಟ
ಪ್ರತಿಭಟನೆ ನಡೆಸಿ ಕೇಂದ್ರದ ಧೋರಣೆಯನ್ನು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು. ತೆರಿಗೆ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಮಾಡಿರುವ ಆರೋಪ ಕೇಸರಿ ಪಾಳಯ ವನ್ನು ಕೆರಳಿಸಿದೆ.
ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಕಾಂಗ್ರೆಸ್ ಹೊಸದಿಲ್ಲಿಯಲ್ಲಿ ಪ್ರತಿಭಟನೆ ನಡೆಸಲಿರುವ ದಿನವೇ (ಫೆ.7) ವಿಧಾನಸೌಧದ ಆವರಣದಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಡಾ| ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ಬಿ.ಶ್ರೀರಾಮುಲು ಸೇರಿ ಹಿರಿಯ ನಾಯಕರು ಭಾಗಿಯಾಗಿದ್ದ ಈ ಸಭೆಯಲ್ಲಿ ಪ್ರತಿಭಟನೆಗೆ ಪ್ರತಿಭಟನೆಯೇ ಉತ್ತರ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಬಿಜೆಪಿ ಮುಂದಾಗಿದೆ.
ಫೆ.7ರಂದು ಬೆಳಗ್ಗೆ ವಿಧಾನಸೌಧದ ಆವರಣದಲ್ಲಿ ಇರುವ ಗಾಂಧಿ ಪ್ರತಿಮೆ ಎದುರು ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು.
ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಯಾವುದೇ ತಾಲೂಕಿನಲ್ಲೂ ಸರಕಾರ ಬರ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.