Advertisement
ಓಕಳೀಪುರಂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ನಗರದ ವಾಟಾಳ್ ನಾಗರಾಜ್ ರಸ್ತೆಯ ಮಹೇಶ್ವರಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುರ್ಚಿಯಲ್ಲಿ ಕೂರಿಸುವವರು, ಕೆಳಗಿಸುವವರು ಜನಗಳೇ.
Related Articles
Advertisement
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರಾವ್ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಕೆಲಸ ಕಾರ್ಯಗಳನ್ನು ರಾಜ್ಯದ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದರು. ಯಾವುದೇ ಗಲಾಟೆ, ಗೌಜು, ಗದ್ದಲವಿಲ್ಲದಂತೆ ಐದು ವರ್ಷ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿದರು ಎಂದು ಹೇಳಿದರು.
ಸಿದ್ದರಾಮಯ್ಯ ಅವರು ನೇರವಾಗಿ ಮಾತನಾಡುತ್ತಾರೆ. ಕೆಲವೊಮ್ಮೆ ಅದು ಕಂಟಕವಾಗುತ್ತದೆ. ಸಿದ್ದರಾಮಯ್ಯ ಸುಖಾಸುಮ್ಮನೆ ಉನ್ನತ ಮಟ್ಟಕ್ಕೆ ಬಂದವರಲ್ಲ. ಸಾಕಷ್ಟು ಹೋರಾಟ, ಎದೆಗಾರಿಕೆ, ಛಲ, ಧೈರ್ಯದಿಂದ ಮೇಲೆ ಬಂದವರು. ನನಗೂ ಪ್ರೋತ್ಸಾಹ ನೀಡಿ ಬೆಳೆಸಿದರು ಎಂದು ಸ್ಮರಿಸಿದರು.ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ರಾಜ್ಯದಲ್ಲಿ ಯಾರಾದರೂ ಜನಪರ ಸರ್ಕಾರ ನೀಡಿದ್ದರೆ ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಹಾತ್ಮ ಗಾಂಧೀಜಿಯವರು ತಂದುಕೊಟ್ಟ ಸ್ವಾತಂತ್ರ್ಯ ಎಲ್ಲರಿಗೂ ತಲುಪುವಂತೆ ಮಾಡಿದವರು ಅವರೇ. ಕೆಲವರು ಸುಳ್ಳು ಹೇಳುತ್ತಾ, ಸುಳ್ಳು ಭರವಸೆ ನೀಡುತ್ತಾ ಬರುತ್ತಿದ್ದು, ಎಚ್ಚರ ವಹಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಬೆಳ್ಳಿ ಗದೆ ನೀಡಿ ಅಭಿನಂದಿಸಲಾಯಿತು.