ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಯೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ಮೇಕೆದಾಟು ಪಾದಯಾತ್ರೆ ಸಂಬಂದ ರಾಮನಗರ, ಕನಕಪುರ, ಬೆಂಗಳೂರಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
Advertisement
ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾರೆಂಟ್ ಆಗಿತ್ತು. ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ ಎಂದು ಹೇಳಿದರು.
Related Articles
Advertisement
ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದರು.
ಬೆಳಕಿಗೆ ತಂದಿದ್ದೇ ಕಾಂಗ್ರೆಸ್ಪಿಎಸ್ ಐ ನೇಮಕಾತಿ ಹಗರಣದಲ್ಲಿ ಯಾರೇ ಭಾಗಿಯಾಗದ್ದರೂ ಕ್ರಮ ಕೈಗೊಳ್ಳಲಿ. ಪ್ರಕರಣದ ಪ್ರಮುಖ ರೂವಾರಿ ಬಿಜೆಪಿ ನಾಯಕಿ ನಾಪತ್ತೆಯಾಗಿದ್ದು ಇನ್ನೂ ಯಾಕೆ ಬಂಧಿಸಿಲ್ಲ. ಈ ಹಗರಣ ಬೆಳಕಿಗೆ ತಂದಿದ್ದೇ ಕಾಂಗ್ರೆಸ್. ಮೊದಲು ಮಾತಾಡಿದ್ದು ಪ್ರಿಯಾಂಕ್ ಖರ್ಗೆ . ಹಗರಣ ನಡೆದ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಗೃಹ ಸಚಿವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ಫೋಟೋಗಳು ಬಂದಿವೆ. ಪರೀಕ್ಷೆ ಬರೆದ 52 ಸಾವಿರ ಅಭ್ಯರ್ಥಿಗಳಿಗೆ ಮೋಸ ಆಗಿದೆ. ಪ್ರತಿಯೊಬ್ಬರಿಂದ 70-80 ಲಕ್ಷ ರೂ. ಪಡೆದಿರುವ ಮಾಹಿತಿಯಿದೆ.
– ಡಿ.ಕೆ.ಶಿವಕುಮಾರ್