Advertisement

ಒಂದೇ ಸಮಾಜದ ಮತಬ್ಯಾಂಕ್‌ ನೆಚ್ಚಿಕೊಂಡು ರಾಜಕಾರಣ ಅಸಾಧ್ಯ

10:27 PM Feb 12, 2023 | Team Udayavani |

ಅರಸೀಕೆರೆ: ರಾಜಕಾರಣದಲ್ಲಿ ಒಂದೇ ಸಮಾಜದ ಮತಬ್ಯಾಂಕ್‌ ನೆಚ್ಚಿಕೊಂಡು ಯಾರೂ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Advertisement

ನಗರದ ಅನಂತ ಸದ್ವಿದ್ಯ ಶಾಲೆಯ ಸಮೀಪದಲ್ಲಿನ ಮೈದಾನದಲ್ಲಿ ಜೆಡಿಎಸ್‌ ವತಿಯಿಂದ ಏರ್ಪಡಿಸಿದ್ದ ಸ್ವಾಭಿಮಾನಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಸರ್ವ ಜನಾಂಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ರಾಷ್ಟ್ರಕವಿ ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಅಭಿವೃದ್ಧಿ ಪಡಿಸುವ ಸಂಕಲ್ಪದಲ್ಲಿ ಹೋರಾಟ ಮಾಡುತ್ತಿರುವ ಜೆಡಿಎಸ್‌ ಪಕ್ಷವನ್ನು ರಾಜ್ಯದ ಜನತೆ ಅಧಿಕಾರಕ್ಕೆ ತರುವುದು ನಿಶ್ಚಿತ ಎಂದು ತಿಳಿಸಿದರು.

ಸಿದ್ದುಗೂ ಇದೇ ಪ್ರಶ್ನೆ ಕೇಳ್ತಾರೆ: ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕುರುಬ ಸಮಾಜದ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಗೆಲುವು ಸಾಧಿಸಿ ಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗದಿದ್ದರೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರಿಗೂ ಇದೇ ಪ್ರಶ್ನೆಯನ್ನು ಶಿವಲಿಂಗೇಗೌಡರು ಕೇಳುವುದರಲ್ಲಿ ಯಾವುದೇ ಸಂದೇಹ ಇಲ್ಲ. ಬೇಕಾದರೆ ಇದನ್ನು ಬರೆದಿಟ್ಟುಕೊಳ್ಳಿ ಎಂದು ಹೇಳಿದರು.

ಜೆಡಿಎಸ್‌ ಶಕ್ತಿ ಪ್ರದರ್ಶನ: ಕಳೆದ 2 ವರ್ಷಗಳಿಂದ ಜೆಡಿಎಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರು ಭಾನು ವಾ ರ ಮೊಳಗಿಸಿದ ರಣ ಕಹಳೆಗೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಧ್ವನಿ ಗೂಡಿಸುವ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ ನಡೆಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಮ್ಮ ಮಕ್ಕಳಾದ ರೇವಣ್ಣ ಮತ್ತು ಕುಮಾರಸ್ವಾಮಿ ಅವರಿಗಿಂತಲ್ಲೂ ಹೆಚ್ಚಿನ ಪ್ರೀತಿಯಿಂದ ರಾಜಕೀಯದಲ್ಲಿ ಬೆಳೆಸಿದ್ದಾರೆ. ಅವರ ಮುಪ್ಪಿನ ಸಮಯದಲ್ಲಿ ಕೈ ಬಿಟ್ಟಿರುವ ಶಿವಲಿಂಗ ನಿನಗೆ ಆವರ ಶಾಪ ತಟ್ಟದೆ ಬಿಡುವುದಿಲ್ಲ.
-ಸಿ.ಎಂ.ಇಬ್ರಾಹಿಂ, ಜೆಡಿಎಸ್‌ ರಾಜ್ಯಾಧ್ಯಕ್ಷ

Advertisement

 

Advertisement

Udayavani is now on Telegram. Click here to join our channel and stay updated with the latest news.

Next