Advertisement
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಮತ್ತೊಂದೆಡೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ ಎಂದರು.
Related Articles
Advertisement
ಇದನ್ನೂ ಓದಿ:Hyderabad: ಬಿರಿಯಾನಿ ಜೊತೆ ರಾಯಿತಾ ಕೇಳಿದ್ದಕ್ಕೆ ಥಳಿತ; ಗ್ರಾಹಕ ಮೃತ್ಯು
ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳ ಅಡ್ಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲವೂ ಕುಂಟುನೆಪ. ಈ ಹಿಂದೆಯು ಇದೇ ನಿಯಮಗಳಿದ್ದವು. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ಕೊಟ್ಟೆವು. ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ರಾಷ್ಟ್ರೀಯ ವಿಪತ್ತಿನ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡುವ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಖಾಸಗಿ ಬಸ್ಸುಗಳ ಮುಷ್ಕರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳುತ್ತಾನೆ ಬಂದರು. ಸುಮ್ಮನೆ ಸಭೆ ಮಾಡಿದರು. ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದರು.
ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ವಿಚಾರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಆಕಸ್ಮಾತ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದರು.