ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರನ್ನು ‘ಭಾಗ್ಯನಗರ’ ಎಂದು ಮರುನಾಮಕರಣ ಮಾಡುವುದಾಗಿ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ಜಯಗಳಿಸಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರನ್ನು ತೆಗೆದು ‘ಭಾಗ್ಯನಗರ’ ಎಂದು ಮರು ನಾಮಕರಣ ಮಾಡುವ ಭರವಸೆಯನ್ನು ಚುನಾವಣಾ ರಾಲಿ ನಡೆಸಿದ ಸಂದರ್ಭದಲ್ಲಿ ನೀಡಿದ್ದರು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸಿನ ಮಾತು ಉತ್ತರ ಪ್ರದೇಶ ಮುಖ್ಯಮಂತ್ರಿಗಳು ಏನು ಕನಸು ಇಟ್ಟು ಬಂದಿದ್ದಾರೋ ಅದು ಕನಸಾಗಿಯೇ ಉಳಿಯಲಿದೆ ಎಂದು ವಾಗ್ದಾಳಿ ನಡೆಸಿದರು.
ಮೊದಲು ಈ ‘ಭಾಗ್ಯನಗರ’ ಎಲ್ಲಿಂದ ಬಂತು ಎಂದು ಅವರನ್ನೇ ಕೇಳಿ? ಅದನ್ನು ಎಲ್ಲಿ ಬರೆಯಲಾಗಿದೆ ಎಂದು ಅವರನ್ನು ಕೇಳಿ ಎಂಧು ಜನರಲ್ಲಿ ಹೇಳಿದರು. ಬಿಜೆಪಿಯವರು ಹೈದರಾಬಾದ್ ಅನ್ನು ದ್ವೇಷಿಸುತ್ತಿದ್ದಾರೆ ಹಾಗಾಗಿ ಹೆಸರು ಬದಲಾಯಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ತೆಲಂಗಾಣದ 119 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. ಚುನಾವಣೆಗೂ ಮುನ್ನ ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿವೆ.
ಇದನ್ನೂ ಓದಿ: IPL Auction; ಇಲ್ಲಿದೆ ಎಲ್ಲಾ ಹತ್ತು ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಪಟ್ಟಿ