Advertisement

Politics: ಡಿ.ಕೆ.ಶಿ ಪ್ರಕರಣ ಹಿಂಪಡೆದಿದ್ದು ಸಂಸದೀಯ ವ್ಯವಸ್ಥೆಗೆ ಅಗೌರವ- ಕಾಗೇರಿ

11:26 PM Nov 25, 2023 | Team Udayavani |

ಬೆಂಗಳೂರು: ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ಪ್ರಕರಣವನ್ನು ಹಿಂಪಡೆಯುವ ನಿರ್ಣಯವು ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ ತರುವಂಥದ್ದು ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಸಭೆಯ ಈ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಆ ನಿರ್ಣಯ ಮಾಡಲು ಸ್ಪೀಕರ್‌ ಸ್ಥಾನವನ್ನು ಅವರು ಬಳಸಿಕೊಂಡಿರುವುದು ದುರ್ದೈವದ ಸಂಗತಿ ಎಂದರು.

ಸ್ಪೀಕರ್‌ ಸ್ಥಾನವು ಸಂವಿಧಾನಬದ್ಧವಾಗಿ ತನ್ನದೇ ಆದ ಘನತೆ, ಗೌರವವನ್ನು ಇಟ್ಟುಕೊಂಡಿದೆ. ಸ್ಪೀಕರ್‌ ಅವರ ಅನುಮತಿಯ ವ್ಯಾಪ್ತಿಯಲ್ಲೇ ಬರದೆ ಇರುವ ವಿಷಯಕ್ಕೆ ಸ್ಪೀಕರ್‌ ಅವರು ಅನುಮತಿ ಕೊಟ್ಟಿಲ್ಲವೆಂದು ಕಾರಣವನ್ನು ಹೇಳಿ ನಿರ್ಣಯ ಮಾಡಿದ್ದು ಕಾಂಗ್ರೆಸ್‌ ಸರಕಾರದ ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಸಿದ್ದರಾಮಯ್ಯ ಹಿರಿಯರು. ಅವರು ಯಾವ ಒತ್ತಡದಲ್ಲಿ ಕೆಲಸ ಮಾಡುತ್ತಿ¨ªಾರೆ ಎಂಬುದು ವ್ಯಕ್ತವಾಗುತ್ತದೆ. ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ಹಾಗೂ ಹಿರಿತನ ಮತ್ತು ಅನುಭವಕ್ಕೆ ತಕ್ಕಂತೆ ಕೆಲಸ ಮಾಡಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next