Advertisement

Assembly Elections: ಛತ್ತೀಸ್‌ಗಢ, ಮಿಜೋರಾಂನಲ್ಲಿ ಮತದಾನ ಆರಂಭ, ಬಿಗಿ ಭದ್ರತೆ

10:28 AM Nov 07, 2023 | sudhir |

ರಾಯ್ಪುರ/ಐಜ್ವಾಲ್: ಛತ್ತೀಸ್‌ಗಢ ಹಾಗೂ ಮಿಜೋರಾಂನಲ್ಲಿ ವಿಧಾನಸಭೆ ಚುನಾವಣೆಯ ಮುನ್ನುಡಿ ಎಂಬಂತೆ ಇಂದು ಮತದಾನ ಆರಂಭವಾಯಿತು.

Advertisement

ಭ್ರಷ್ಟಾಚಾರ, ಬೆಲೆಯೇರಿಕೆ, ಹಗರಣಗಳು, ರಾಜಕೀಯ ನಾಯಕರ ರಾಲಿಗಳು ಸೇರಿ ಹಲವು ವಾಗ್ಯುದ್ಧಗಳಿಗೆ ಸಾಕ್ಷಿಯಾಗಿದ್ದ ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿದೆ. ಇದರೊಂದಿಗೆ ಒಟ್ಟು 20 ಕ್ಷೇತ್ರಗಳ 223 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ.

ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಭೇಟಿ ನೀಡಿ ಮತ ಚಲಾವಣೆ ಮಾಡುತ್ತಿದ್ದಾರೆ.

ಅದೇ ರೀತಿ ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತಗಳನ್ನು ಚಲಾಯಿಸುತ್ತಿದ್ದಾರೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಶನಲ್‌ ಫ್ರಂಟ್‌, ವಿಪಕ್ಷ ಜೊರಾಂ ಪೀಪಲ್ಸ್‌ ಫ್ರಂಟ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 18 ಮಹಿಳೆಯರು ಸೇರಿ 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದ್ದು, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 25 ಮತ್ತು 30 ರಂದು ಒಂದೇ ಹಂತದ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.

Advertisement

ಈ ವಿಧಾನಸಭಾ ಚುನಾವಣೆಗಳು ಕೇಂದ್ರದಲ್ಲಿ ಬಿಜೆಪಿ, ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ ಇಂಡಿಯಾ ಬಣ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಇದರ ಫಲಿತಾಂಶವು ಮುಂಬರುವ 2024 ರ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಮೇಲೆ ಪ್ರಭಾವ ಬೀರುವುದು ಖಚಿತ.

ಇದನ್ನೂ ಓದಿ: D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next