Advertisement

ಹುಲಿ ಸೆರೆಗೆ ಆಗ್ರಹಿಸಿ ಪೊನ್ನಂಪೇಟೆ ಬಂದ್‌

01:27 AM Mar 12, 2021 | Team Udayavani |

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಮೂವರು ಅಮಾಯಕರ ಸಾವಿಗೆ ಕಾರಣವಾಗಿರುವ ಹುಲಿ ಯನ್ನು ನಿಗ್ರಹಿಸುವಲ್ಲಿನ ಸರಕಾರದ ವೈಫ‌ಲ್ಯವನ್ನು ಖಂಡಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನೀಡಿದ ಕರೆಯಂತೆ ಗುರುವಾರ ಪೊನ್ನಂಪೇಟೆ ತಾಲೂಕಿನಲ್ಲಿ ಮಧ್ಯಾಹ್ನದವರೆಗೆ ಬಂದ್‌ ಸಂಪೂರ್ಣ ಯಶಸ್ವಿಯಾಯಿತು.

Advertisement

ತಾಲೂಕಿನ ಪ್ರಮುಖ ವಾಣಿಜ್ಯ ನಗರಿ ಗೋಣಿಕೊಪ್ಪಲು ಸೇರಿದಂತೆ ನಿಟ್ಟೂರು, ಬಾಳೆಲೆ, ಶ್ರೀಮಂಗಲ, ಕುಟ್ಟ, ಟಿ. ಶೆಟ್ಟಿಗೇರಿ, ಹುದಿಕೇರಿ ವಿಭಾಗಗಳಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಮುಚ್ಚುವ ಮೂಲಕ ಹುಲಿ ಸೆರೆಗೆ, ಇಲ್ಲವೇ ಗುಂಡಿಕ್ಕುವಂತೆ ಸರಕಾರದ ಮೇಲೆ ಒತ್ತಡ ಹೇರಲಾಯಿತು.

ಹುಲಿ ದಾಳಿಯಿಂದ ಜೀವಹಾನಿ ಸಂಭವಿಸಿದ ಬೆಳ್ಳೂರು ಗ್ರಾಮದಲ್ಲಿ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಅಹೋರಾತ್ರಿ ಧರಣಿಗೆ ಮುಂದಾಗಿರುವ ಗ್ರಾಮೀಣರು, ಹುಲಿ ಸೆರೆ ಹಿಡಿಯುವ ಇಲ್ಲವೆ ಗುಂಡಿಕ್ಕುವವರೆಗೆ ಪ್ರತಿಭಟನೆ ಮುಂದುವರಿಸುವ ದೃಢ ನಿರ್ಧಾರ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next