Advertisement

ಹೆಚ್ಚಿನ ಮತದಾರರನ್ನು ನೋಂದಾಯಿಸಿ: ಪೊನ್ನುರಾಜ್‌

11:50 PM Dec 07, 2022 | Team Udayavani |

ಮಂಗಳೂರು : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ತಹಶೀಲ್ದಾರರು ಹೆಚ್ಚಿನ ಮತದಾರರನ್ನು ನೋಂದಾಯಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಮತದಾರರ ಪಟ್ಟಿ ವೀಕ್ಷಕರು, ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಅವರು ತಿಳಿಸಿದ್ದಾರೆ.

Advertisement

ಜಿ. ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಈ ಕುರಿತು ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಅಂತಿಮ ಮತದಾರ ಪಟ್ಟಿ 2023ರ ಜ. 5ರಂದು ಪ್ರಕಟವಾಗಲಿದೆ. ಪರಿಷ್ಕರಣೆ ಸಂದರ್ಭ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆಯುವ ಸಂದರ್ಭ ಎಚ್ಚರಿಕೆ ವಹಿಸಬೇಕು. ಮತದಾರರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರವನ್ನು ಪಡೆಯಬೇಕು.

ಸ್ಥಳಾಂತರಗೊಂಡ ಮತದಾರರ ವಿವರವನ್ನು ಖಚಿತ ಪಡಿಸಿಕೊಳ್ಳಬೇಕು. ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪಟ್ಟಿಯನ್ನು ತೆಗೆದುಕೊಂಡು ಅವರ ಜನ್ಮ ದಿನಾಂಕವನ್ನು ಪರಿಶೀಲಿಸಿ, ಅರ್ಹರಿದ್ದರೆ ಮತದಾರರ ಪಟ್ಟಿಗೆ ಅವರನ್ನು ಸೇರ್ಪಡೆ ಮಾಡುವ ಕೆಲಸ ಮಾಡಬೇಕು. ಈ ಬಗ್ಗೆಯೂ ಸ್ವೀಪ್‌ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಕೈಗೊಂಡು ವ್ಯಾಪಕವಾಗಿ ಜಾಗೃತಿ ಮೂಡಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಹೆಚ್ಚು ದಾಖಲಾಗುವಂತೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌., ಜಿ. ಪಂ. ಸಿಇಒ ಡಾ| ಕುಮಾರ್‌, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್‌ ಮೋಹನ್‌ ಹಾಗೂ ಗಿರೀಶ್‌ ನಂದನ್‌ ಉಪಸ್ಥಿತರಿದ್ದರು. ಚುನಾವಣ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಇದನ್ನೂ ಓದಿ: ಸಿಎಸ್‌ಐ ಕರ್ನಾಟಕ ದಕ್ಷಿಣ ಸಭಾ ಪ್ರಾಂತ ವಂ| ಹೇಮಚಂದ್ರ ಕುಮಾರ್‌ ನೂತನ ಬಿಷಪ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next