Advertisement
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ತಾಲೂಕು ಅಧ್ಯಕ್ಷ ಅಯ್ಯಣ್ಣ ಕನ್ಯಾಕೋಳೂರ, ಕಲಬುರಗಿ, ಯಾದಗಿರಿ ಜಿಲ್ಲೆ ಸೇರಿದಂತೆ ಹಲವಡೆ ಕೋಲಿ ಸಮಾಜದವರ ಮೇಲೆ ನಿರಂತರ ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ. ಶರಣ ಹಣಮಂತ್ರಾಯ ಪೂಜಾರಿ ಅವರನ್ನು ಕಳೆದ 15 ದಿನಗಳ ಹಿಂದೆಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
Related Articles
Advertisement
ಸಿಬಿ ಕಮಾನದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಬಸವೇಶ್ವರ ವೃತ್ತದಲ್ಲಿ ಅನಾವರಣಗೊಂಡಿತು. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸೋಮಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್, ನಗರ ಸಿಪಿಐ ನಾಗರಾಜ ಜೆ, ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಇದ್ದರು.
ಸಂಚಾರ ಅಸ್ತವ್ಯಸ್ತ ನಗರದ ಪ್ರಮುಖ ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆದ ಪರಿಣಾಮ, ಬಸ್ ಮತ್ತುಖಾಸಗಿ ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಬೈಕ್
ಸವಾರರು, ಶಾಲಾ ಮಕ್ಕಳು ಸೇರಿದಂತೆ ಬಸ್, ಕಬ್ಬು ಸಾಗಣೆ ಲಾರಿಗಳು ರಸ್ತೆಯುದ್ದಕ್ಕೂ ನಿಂತಿರುವುದು ಕಂಡು ಬಂದಿತು. ತನಿಖೆ ನಂತರ ಕ್ರಮ ಕೊಲೆ ಮಾಡಿದ ಆರೋಪಿ ಅಂದೇ ಶರಣಾಗಿದ್ದಾನೆ. ಆದರೆ ದೂರಿನ್ವಯ ಇನ್ನೂ ಮೂರು ಆರೋಪಿಗಳಿದ್ದಾರೆ ಎಂದು ತಿಳಿಸಲಾಗಿದೆ. ಆ ಆರೋಪಿಗಳ ಹೆಸರು ತಿಳಿಸಲು ಬರುವುದಿಲ್ಲ. ಪ್ರಕರಣ ತೀವ್ರ ತನಿಖೆ ಹಂತದಲ್ಲಿದೆ. ಕಾರಣ ಆರೋಪಿಗಳ ಹೆಸರು ಬಹಿರಂಗ ಪಡಿಸಲ್ಲ. ತನಿಖೆ ನಂತರ ಆರೋಪಿಗಳು ಈ ಪ್ರಕರಣದಲ್ಲಿ
ಭಾಗಿಯಾಗಿದ್ದಾರೆ ಎಂಬ ಸುಳಿವು ದೊರೆತ ನಂತರವೇ ಅವರನ್ನು ಬಂಧಿಸಲಾಗುವುದು.
ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸ್ಪಿ ಯಾದಗಿರಿ.