Advertisement

ಕಾಂಗ್ರೆಸ್ ಪಟ್ಟಿಯಲ್ಲಿ ಪೂಜಾರಿ ಬೆಂಬಲಿಗರನ್ನು ಕಡೆಗಣಿಸಲಾಗಿದೆ: ವಿಜಯಕುಮಾರ್ ಶೆಟ್ಟಿ

01:42 PM Nov 01, 2019 | Naveen |

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿಯಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಬೆಂಬಲಿರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಆರೋಪಿಸಿದರು.

Advertisement

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಮಹಾನಗರ ಪಾಲಿಕೆ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿ ನಿರ್ಧರಿಸುವಾಗ ಜನಾರ್ಧನ ಪೂಜಾರಿ ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರನ್ನು ಕರೆದು ಪಟ್ಟಿ ಅಂತಿಮಗೊಳಿಸುತ್ತಿದ್ದರು. ಆದರೆ ಈ ಬಾರಿ ಪೂಜಾರಿ ಅವರನ್ನು ಕಡೆಗಣಿಸಲಾಗಿದೆ. ಕಾಂಗ್ರೆಸ್ ಪಕ್ಷದ ಧ್ಯೇಯ, ಉದ್ದೇಶಗಳನ್ನು ಸ್ಥಾಪಿತ ಹಿತಾಸಕ್ತಿಗಳು ಬಲಿಕೊಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪ್ರಮುಖರಾದ ಕಳ್ಳಿಗೆ ತಾರಾನಾಥ ಶೆಟ್ಟಿ ಮಾತನಾಡಿ, ಈ ಬಾರಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಪೂಜಾರಿ ಬೆಂಬಲಿಗ ಮೂರು ಮಂದಿ ಮಾಜಿ ಮೇಯರ್ ಗಳನ್ನು ಅಭ್ಯರ್ಥಿ ಪಟ್ಟಿಯಿಂದ ಕೈ ಬಿಡಲಾಗಿದೆ. ಅಭ್ಯರ್ಥಿಗಳ ಪಟ್ಟಿ ವ್ಯವಸ್ಥಿತವಾಗಿರಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಲ್ಲಿ ಪೂಜಾರಿಗಳು ಚರ್ಚಿಸಿದ್ದರು ಎಂದರು. ಮಾಜಿ ಮೇಯರ್ ಪುರಂದರದಾಸ್ ಅವರು ಮಾತನಾಡಿ, ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡದಿರುವುದು ಬೇಸರ ತಂದಿದೆ. ಈಗಾಗಲೇ ಬೇರೆಬೇರೆ ಪಕ್ಷದ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ. ಎರಡು ದಿನಗಳಲ್ಲಿ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next