Advertisement

ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ವಿರುದ್ಧ ಪೂನಂ ಸಿನ್ಹಾ ಸ್ಪರ್ಧೆ?

09:19 AM Apr 05, 2019 | Team Udayavani |

ಲಕ್ನೋ: ಉತ್ತರಪ್ರದೇಶದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಲಕ್ನೋ ಲೋಕಸಭಾ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಮ್‌ ಅವರು ಸಮಾಜವಾದಿ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

Advertisement

ನಂಬಲರ್ಹ ಮೂಲಗಳ ವರದಿ ಪ್ರಕಾರ ಸಮಾಜವಾದಿ ಪಕ್ಷ ಪೂನಮ್‌ ಸಿನ್ಹಾ ಅವರಿಗೆ ಟಿಕೆಟ್‌ ನೀಡಲು ನಿರ್ಧರಿಸಿದ್ದು , ಬಿಎಸ್‌ಪಿ ಕೂಡ ಬೆಂಬಲಿಸುವುದಾಗಿ ತಿಳಿಸಿದೆ.

ಕಾಂಗ್ರೆಸ್‌ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ನೀಡುವುದಾಗಿ ತಿಳಿಸಿದ್ದು ಇದು ಪೂನಮ್‌ ಮತ್ತು ರಾಜನಾಥ್‌ ಸಿಂಗ್‌ ನಡುವೆ ನೇರ ಸ್ಪರ್ಧೆ ನಡೆಯಲು ಕಾರಣವಾಗುತ್ತದೆ.

ಈಗಾಗಲೇ ಬಿಜೆಪಿಗೆ ಗುಡ್‌ಬೈ ಹೇಳಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಶತ್ರುಘ್ನ ಸಿನ್ಹಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪಾಟ್ನಾ ಸಾಹೀಬ್‌ನಿಂದ ಕಣಕ್ಕಿಳಿಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next