Advertisement

ಕಳಪೆ ಬೀಜ; ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

11:16 AM Jun 09, 2020 | Suhan S |

ಬೆಳಗಾವಿ: ಕೃಷಿ ಇಲಾಖೆ ಮೂಲಕ ವಿತರಿಸಲಾದ ಸೋಯಾಬೀನ್‌ ಬೀಜಗಳು ಕಳಪೆ ಗುಣಮಟ್ಟದವಾಗಿದ್ದು, ಸರ್ಕಾರ ಕೂಡಲೇ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ರೈತರಿಗೆ ಕೃಷಿ ಇಲಾಖೆ ಮೂಲಕ ಕಳಪೆ ಸೋಯಾಬೀನ್‌ ಬೀಜಗಳನ್ನು ವಿತರಿಸಲಾಗಿತ್ತು. ಇದರಿಂದ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಆದ್ದರಿಂದ ಹಾನಿ ಅನುಭವಿಸಿದ ರೈತರಿಗೆ ಕೂಡಲೇ ಸರ್ಕಾರವು ಪರಿಹಾರ ನೀಡಬೇಕು. ಬೈಲಹೊಂಗಲ ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅದಿಕಾರಿಗಳು ಕೋಟ್ಯಂತರ ರೂ. ಭ್ರಷ್ಟಾಚಾರ ನಡೆಸಿದ್ದು, ಕೆರೆ ಅಭಿವೃದ್ಧಿ ಮಾಡದೇ ವಂಚಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ರಾಜು ಮರವೆ, ಹಣಮಂತ ಬಾಳೇಕುಂದ್ರಿ, ಅನಿಲ ಅನಗೋಳಕರ, ಭೂಮೇಶ ಬಿರ್ಜೆ, ರಮಾಕಾಂತ ಬಾಳೇಕುಂದ್ರಿ, ನಿತೀನ್‌ ಪೈಲವನಾಚೆ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next