ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಕಠಿಣ ಕಾನೂನು ಕ್ರಮ ಕೈಗೊಂಡು ಅಂಗಡಿಗಳ ಲೈಸನ್ಸ್ ಅಮಾನತಿನಲ್ಲಿಡಲಾಗುವುದು.
ಜೊತೆಗೆ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದರು.
Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರೈತರು ಇಂದು ಸಂಕಷ್ಟದಲ್ಲಿ ಇದ್ದಾರೆ ಅವರಿಗೆ ತೊಂದರೆ ಯಾಗಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ರೈತರಿಗೆ ಬಿತ್ತನೆ ಬೀಜ ರಸಗೊಬ್ಬರದಲ್ಲಿ ತೊಂದರೆ ಆದರೆ ಆಯಾ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆಯೂ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
Related Articles
ವಿಧಾನ ಪರಿಷತ್ ಸದಸ್ಯರುಗಳಾದ ತಿಪ್ಪೇಸ್ವಾಮಿ ಚೌಡರಡ್ಡಿ ತೂಪ್ಪಲ್ಲಿ, ಬೆಮೆಲ್ ಕಾಂತರಾಜ್, ಶಾಸಕರಾದ ವೀರಭದ್ರಯ್ಯ, ಬಿ.ಸತ್ಯನಾರಾಯಣ, ಜಿ.ಬಿ. ಜ್ಯೋತಿ ಗಣೇಶ್, ಜಯರಾಮ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಪಂ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಎಸ್ಪಿ ಡಾ. ಕೋ.ನ.ವಂಸಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಇದ್ದರು.
Advertisement