Advertisement

ಕಳಪೆ ಬಿತ್ತನೆ ಬೀಜ, ಗೊಬ್ಬರ ವಿತರಣೆ ಸಲ್ಲ: ಬಿ.ಸಿ. ಪಾಟೀಲ್‌

10:12 PM May 13, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಚಟುವಟಿಕೆಗಳು ಪ್ರಾರಂಭವಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಸರಬರಾಜು ಆಗದಂತೆ ಕ್ರಮ ವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌, ಅಧಿಕಾರಿಗಳಿಗೆ ಸೂಚಿಸಿದರು.

Advertisement

ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು, ಮುಂಗಾರು ಬಿತ್ತನೆಗೆ ಸರಿಯಾಗಿ ರೈತರಿಗೆ ಅವುಗಳನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next