Advertisement
ಹೌದು, ಪರಿಸರಕ್ಕೆ ಅದರಲ್ಲೂ ಜೀವ ಜಲದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿ ಜನರ ಆರೋಗ್ಯವನ್ನು ಕೆಡಿಸುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ಆಗ ದಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಜಿಲ್ಲಾದ್ಯಂತ ಜಿಲ್ಲಾಡಳಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿ ಮೇಲೆ ಕಣ್ಗಾವಲು ಇರಿಸಿದೆ.
Related Articles
Advertisement
ಜಿಲ್ಲಾಡಳಿತ ಅಥವ ನಗರ ಸ್ಥಳೀಯ ಸಂಸ್ಥೆಗಳು ಆರಂಭದಿಂದ ಹಬ್ಬ ಸಮೀಪಿಸುವವರೆಗೂ ಪ್ಯಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣಪತಿ ಮೂರ್ತಿಗಳ ತಯಾರಿ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿರುತ್ತದೆ. ಆದರೆ ಕೊನೆಯ ಒಂದರೆಡು ದಿನಗಳಲ್ಲಿ ಪಿಒಪಿ ಗಣೇಶನ ಮೂರ್ತಿಗಳು ಕದ್ದುಮುಚ್ಚಿ ಮಾರಾಟಕ್ಕೆ ಅಧಿಕಾರಿಗಳೇ ಅವಕಾಶ ಕೊಡುತ್ತಾರೆಂಬ ಆರೋಪ ಸಾರ್ವಜನಿಕ ವಲಯದಲ್ಲಿ ಅದರಲ್ಲೂ ಪರಿಸರ ಪ್ರೇಮಿಗಳಿಂದ ಕೇಳಿ ಬರುತ್ತಿದೆ. ರಸಾಯನಿಕಗಳನ್ನು ಬಳಸಿ ತಯಾರಿಸುವ ಪಿಒಪಿ ಗಣೇಶ ಮೂರ್ತಿಗಳು ಪರಿಸರಕ್ಕೆ ಹೆಚ್ಚು ಹಾನಿ ಉಂಟು ಮಾಡುತ್ತೇವೆ. ಆದರೆ, ನೈಸರ್ಗಿಕವಾಗಿ ಮಣ್ಣು ಬಳಸಿ ತಯಾರಿಸುವ ಗಣಪಣ ಮೂರ್ತಿಗಳು ಹೆಚ್ಚು ಅಲಂಕಾರಿಕವಾಗಿ ಇರುವುದಿಲ್ಲ ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ಸಿಗುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ಅದರಲ್ಲೂ ಪರಿಸರ ಹಾಗೂ ಸ್ವತ್ಛತೆ ವಿಚಾರದಲ್ಲಿ ಸಾಕಷ್ಟು ಕಾಳಜಿ ವಹಿಸುತ್ತಿರುವ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಹೆಚ್ಚು ನಿಗಾವಹಿಸಿ ಸಂಬಂದಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕಿದೆ.
ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದ ಮಾಲಿನ್ಯ ನಿಯಂತ್ರಣ ಮಂಡಳಿ :
ಗಣೇಶ ಚತುರ್ಥಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಅಕ್ರಮವಾಗಿ ಅಥವ ಕದ್ದುಮುಚ್ಚಿ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ತಡೆಯುವಂತೆ ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ವಹಿಸಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ಮಾಡುವಂತೆ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಒಂದೂ ಪ್ರಕರಣ ದಾಖಲಿಸಿಲ್ಲ :
ಜಿಲ್ಲೆಯ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಕಚೇ ರಿಯ ಅಧಿಕಾರಿಗಳು ಹೇಳುವ ಪ್ರಕಾರ ಕಳೆದ ವರ್ಷ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗು ಮಾರಾಟದ ವಿಚಾರ ದಲ್ಲಿ ಯಾವುದೇ ರೀತಿಯಲ್ಲಿ ಒಂದು ಪ್ರಕರಣ ಕೂಡ ದಾಖಲಿ ಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಈಗಾಗಲೇ ನಿಷೇಧಿತ ಪಿಒಪಿ ಗಣೇಶಮೂರ್ತಿಗಳ ಮಾರಾಟದ ಮೇಲೆ ನಿಷೇಧ ಹೇರ ಲಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯ ಸ್ಥರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪತ್ರ ಬರೆದು ಸೂಕ್ತ ನಿರ್ದೇಶನ ನೀಡಲಾಗಿದೆ. ಅಲ್ಲದೇ ಬಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸಿದರೆ ಅಥವ ಮಾರಾಟ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ವಹಿಸಿ ಮಾರಾಟಗಾರರ ಮೇಲೆ ದೂರು ದಾಖಲಿಸುವಂತೆ ಸೂಚಿಸ ಲಾಗಿದೆ. ಜೇಡಿ ಮಣ್ಣಿನಿಂದ ತಯಾರಿಸಿ ಗಣಪನ ಮೂರ್ತಿಗಳ ಮಾರಾಟ ಮಾಡಿ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.-ಟಿ.ಎಂ.ಸಿದ್ದೇಶ್ವರ ಬಾಬು, ಪರಿಸರ ಅಧಿಕಾರಿ, ಪ್ರಾದೇಶಿಕ ಕಚೇರಿ, ಚಿಕ್ಕಬಳ್ಳಾಪುರ.
ಪರಿಸರಕ್ಕೆ ಹಾನಿ ಉಂಟು ಮಾಡುವ ನಿಷೇಧಿತ ಪ್ಯಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ಆಗದಂತೆ ಸೂಕ್ತ ಎಚ್ಚರಿಕೆ ವಹಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಗರಸಭೆಗೆ ಸೂಕ್ತ ತಿಳವಳಿಕೆ ಪತ್ರ ಬರೆದಿದ್ದಾರೆ. ಅದರ ಅನುಸಾರ ನಗರಸಭೆ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಆಗದಂತೆ ನಗರಸಭೆ ಸೂಕ್ತ ನಿಗಾ ವಹಿಸಲಿದೆ.-ಶ್ರೀಕಾಂತ್, ನಗರಸಭೆ ಆಯುಕ್ತರು, ಶಿಡ್ಲಘಟ್ಟ. -ಕಾಗತಿ ನಾಗರಾಜಪ್ಪ