Advertisement
ಬಡವರ, ಪರಿಶಿಷ್ಟರ, ಕೃಷಿಕರ, ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಹಲವಾರು ಅಭಿವೃದ್ಧಿ ಕ್ಷೇತ್ರಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ಕೊಡಲಾಗಿದೆ. ಎಲ್ಲವುದಕ್ಕಿಂತ ಮುಖ್ಯವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನವನ್ನು ಮೀಸಲಿಡಲಾಗಿದೆ. ಕೋವಿಡ್ ಹೆಮ್ಮಾರಿಯನ್ನು ತಡೆಗಟ್ಟಲು ಈ ಬಾರಿಯ ಬಜೆಟ್ ವಿಶೇಷ ಗಮನ ನೀಡಿದೆ. 11,000 ಕಿಮೀ. ಹೆಚ್ಚುವರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, 650 ಕಿ.ಮೀ. ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಉನ್ನತೀಕರಿಸಲು ಅನುದಾನ ಮೀಸಲಿರಿಸಲಾಗಿದೆ. ವಿದ್ಯಾವಂತ ನಿರುದ್ಯೋಗಗಳಿಗೆ ಉದ್ಯೋಗ ನೀಡುವ ಸದುದ್ದೇಶದಿಂದ 7 ಹೊಸ ಟೆಕ್ಸ್‍ಟೈಲ್ಸ್ ಸ್ಥಾಪನೆ, ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ನೀಡಲು 3000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
Related Articles
Advertisement
ಕ್ಷೇತ್ರ ಸಂಪರ್ಕ ವ್ಯವಸ್ಥೆ, ನಗರ ಪ್ರದೇಶಗಳ ಸಾರಿಗೆ ಸಂಪರ್ಕ ಅಭಿವೃದ್ಧಿ ಪಡಿಸಲು ಗಮನ ನೀಡಲಾಗಿದೆ. ಮೆಟ್ರೋ ವಿಸ್ತರಣೆಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ನಗರಕ್ಕೆ ಇನ್ನೂ 2 ಮಾರ್ಗಗಳ ಮೆಟ್ರೋ ರೈಲು ಯೋಜನೆಗೆ ಅನುದಾನ ಒದಗಿಸಲಾಗಿದೆ. ಅತಿಮುಖ್ಯವಾಗಿ ಅಭಿವೃದ್ಧಿ ಅಂಶವೆಂದರೆ ವಸತಿ ಸೌಕರ್ಯಗಳ ವಿತರಣೆ, ಕರ್ನಾಟಕವೂ ಸೇರಿದಂತೆ ಈಗ ಕೈಗೊಳ್ಳಲಾಗಿರುವ ವಸತಿ ಕಾರ್ಯಯೋಜನೆಗಳಿಗೆ ಹೆಚ್ಚು ಅನುದಾನ ದೊರಕಲಿದೆ. ತೆರಿಗೆ ವಂಚನೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಯನ್ನು ಬಿಗಿಗೊಳಿಸಿ ಆದಾಯ ಹೆಚ್ಚಳಕ್ಕೆ ಕ್ರಮವಹಿಸಿದೆ ಎಂದಿದ್ದಾರೆ.