Advertisement

Popular CM; ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ಗೆ ಎರಡನೇ ಸ್ಥಾನ

09:43 AM Feb 18, 2024 | Team Udayavani |

ಹೊಸದಿಲ್ಲಿ: ದೇಶದ ವಿವಿಧ ಮುಖ್ಯಮಂತ್ರಿಗಳು ತಮ್ಮ ಕೆಲಸ, ಪ್ರಭಾವಗಳಿಂದ ಉತ್ತಮ ಜನಪ್ರಿಯತೆ ಹೊಂದಿದ್ದಾರೆ. ಇದೀಗ ಈ ಬಾರಿಯ ಮುಖ್ಯಮಂತ್ರಿಗಳ ಜನಪ್ರಿಯತೆಯ ಪಟ್ಟಿ ಬಿಡುಗಡೆಯಾಗಿದೆ. ಇತ್ತೀಚೆಗೆ ತ್ರಿಪುರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಡಾ. ಮಾನಿಕ್ ಸಾಹ ಅವರು ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

Advertisement

ಈ ಸಮೀಕ್ಷೆಯು ದೇಶದ ಮುಖ್ಯಮಂತ್ರಿಗಳ ಜನಪ್ರಿಯತೆ ಮತ್ತು ಸ್ವೀಕಾರಾರ್ಹತೆಯನ್ನು ಅಳೆಯುವ ಗುರಿಯನ್ನು ಹೊಂದಿದ್ದು, ಕೆಲವು ಕುತೂಹಲಕಾರಿ ಫಲಿತಾಂಶಗಳನ್ನು ಅನಾವರಣಗೊಳಿಸಿದೆ.

ಸಮೀಕ್ಷೆಯ ಪ್ರಕಾರ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಇವರು ಜನಪ್ರಿಯತೆಯ ರೇಟಿಂಗ್ ನಲ್ಲಿ ಶೇಕಡಾ 52.7 ಅಂಕ ಪಡೆದಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅವರು ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಆದಿತ್ಯನಾಥ್ ಅವರಿಗೆ ಶೇ 51.3 ರಷ್ಟು ಮಂದಿ ವೋಟ್ ಮಾಡಿದ್ದಾರೆ.

ಮೂರನೇ ಸ್ಥಾನವನ್ನು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೊಂದಿದ್ದಾರೆ, ಅವರು 48.6 ಶೇಕಡಾ ರೇಟಿಂಗ್ ಗಳಿಸಿದ್ದಾರೆ. ನಾಲ್ಕನೇ ಸ್ಥಾನವನ್ನು ಗುಜರಾತ್‌ ನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ 42.6 ಶೇಕಡಾ ರೇಟಿಂಗ್‌ನೊಂದಿಗೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next