Advertisement

ತಿಂಗಳಂತ್ಯದೊಳಗೆ ಅನುದಾನ ಬಳಸಿ: ಡೀಸಿ

02:17 PM Mar 08, 2021 | Team Udayavani |

ಚಾಮರಾಜನಗರ: ಆರ್ಥಿಕ ವರ್ಷ ಅಂತ್ಯಗೊಳ್ಳುತ್ತಿರುವುದರಿಂದ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿಯಲ್ಲಿ ಹಿಂದೆ ಉಳಿಯಬಾರದು ಎಂದು ಜಿಲ್ಲಾಧಿಕಾರಿ ಡಾ| ಎಂ. ಆರ್‌. ರವಿ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟಪಂಗಡ ವಿಶೇಷ ಘಟಕ ಯೋಜನೆಯಡಿ ಇಲಾಖೆಗಳು ನಿರ್ವಹಿಸಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ನಿಗದಿಯಾಗಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಪರಿಶಿಷ್ಟರ ಅಬಿವೃದ್ದಿ ಕಾರ್ಯಗಳಿಗೆ ಸದ್ಬಳಕೆಯಾಗಬೇಕು. ಅನುದಾನ ವಾಪಸ್‌ ಹೋಗಬಾರದು. ಉದ್ದೇಶಿತಯೋಜನಾ ಕಾರ್ಯಕ್ರಮಗಳು ವೇಗವಾಗಿ ನಡೆಯುವಂತೆ ಅಧಿಕಾರಿಗಳು ಗಮನಹರಿಸಬೇಕೆಂದರು.ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡವಿಶೇಷ ಘಟಕ ಯೋಜನೆಯಡಿ ಕೈಗೊಂಡಿ ರುವ ಕಲ್ಯಾಣ ಕಾರ್ಯಕ್ರಮಗಳನ್ನು ಮಾರ್ಚ್‌ಅಂತ್ಯದೊಳಗೆ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಬೇಕು. ಬಾಕಿ ಉಳಿದಿರುವ ಅಭಿವೃದ್ದಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದರು.

ಪಶು ಆಸ್ಪತ್ರೆ ಕಟ್ಟಡನಿರ್ಮಾಣಕ್ಕೆ  ಚಾಲನೆ :

ಗುಂಡ್ಲುಪೇಟೆ: ಕ್ಷೇತ್ರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಹೇಳಿದರು.

Advertisement

ತಾಲೂಕಿನ ಕುಂದಕೆರೆಯಲ್ಲಿ 34 ಲಕ್ಷ ರೂ.ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕುಂದಕೆರೆ ಸುತ್ತಮುತ್ತಲಿನ ರೈತರಿಗೆ ನೆರವಾಗಲು ಪಶು ಆಸ್ಪತ್ರೆ ನಿರ್ಮಿಸ ಲಾಗುತ್ತಿದ್ದು, ಗುತ್ತಿಗೆದಾರರ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದರು.ಇದೇ ವೇಳೆ ಗ್ರಾಮದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಸಿದರು.ಈ ವೇಳೆ ಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷ ಬಿ.ಎಂ.ಮಲ್ಲು, ಸದಸ್ಯ ಕೆ.ಎನ್‌.ಸುರೇಂದ್ರ, ಜಿಲ್ಲಾ ಹಾಪ್‌ ಕಾಮ್ಸ್‌ ಅಧ್ಯಕ್ಷ ಕೆ.ಬಿ.ಶಾಂತಪ್ಪ, ಮುಖಂಡರಾದ ಕೆ.ಎಂ.ನಾಗಮಲ್ಲಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next