ಬೆಳಗಾವಿ: ಸ್ಥಳೀಯ ವಿಧಾನ ಪರಿಷತ್ ಸದಸ್ಯರೊಬ್ಬರು ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದು ಸಾಕಷ್ಟು ಚರ್ಚೆ ಹಾಗೂ ಟೀಕೆಗೆ ಎಡೆ ಮಾಡಿಕೊಟ್ಟಿದೆ.
ಬೆಳಗಾವಿ ಮೀಡಿಯಾ ಫೋರ್ಸ್ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಮಂಗಳವಾರ ಈ ಶಾಸಕರು ಕೆಲ ಅಶ್ಲೀಲ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದು, ಎಲ್ಲೆಡೆ ವೈರಲ್ ಆಗಿದೆ. ಈ ಗ್ರೂಪ್‌ನಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು, ಜನಪ್ರತಿನಿಗಳು ಹಾಗೂ ಗಣ್ಯ ವ್ಯಕ್ತಿಗಳು ಇರುವುದು ವಿಶೇಷ.
ಗ್ರೂಪ್‌ನಲ್ಲಿ ಫೋಟೋಗಳು ಅಪ್ ಲೋಡ್ ಆಗುತ್ತಿದ್ದಂತೆ ಅನೇಕ ಅಧಿಕಾರಿಗಳು ಗ್ರೂಪ್‌ನಿಂದ ಹೊರಗೆ ಹೋಗಿದ್ದಾರೆ. ಶಾಸಕರು ಇಂಥ ಚಿತ್ರಗಳನ್ನು ಅಪ್‌ಲೋಡ್ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಅವರ
ಮೊಬೈಲ್ ಸ್ವಿಚ್‌ಆಫ್ ಆಗಿತ್ತು.