Advertisement

High Court: ಕೊಡೇರಿಯಲ್ಲಿ ಬಂದರು- ಸರಕಾರಕ್ಕೆ ನೋಟಿಸ್‌

11:28 PM Nov 24, 2023 | Team Udayavani |

ಬೆಂಗಳೂರು: ಎಡಮಾವಿನಹೊಳೆ ನದಿ ಪಾತ್ರದ ಕೊಡೇರಿ ಕಡಲ ಕಿನಾರೆಯಲ್ಲಿ ಕಿರು ಮೀನುಗಾರಿಕೆ ಬಂದರು ನಿರ್ಮಾಣ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಕೊಡೇರಿ ಬಂದರು ಮೀನುಗಾರರ ಸಹ ಕಾರಿ ಸಂಘದ ಪ್ರಕಾಶ್‌ ಸಲ್ಲಿಸಿದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠದಲ್ಲಿ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಕರ್ನಾಟಕ ರಾಜ್ಯ ಕರಾವಳಿ ನಿರ್ವಹಣ ಪ್ರಾಧಿಕಾರ, ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕರು, ಬಂದರು ಮತ್ತು ಮೀನುಗಾರಿಕೆ ಉಡುಪಿ ವಿಭಾಗದ ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಅರಣ್ಯ ಇಲಾಖೆ ಪ್ರಧಾನ ವನ್ಯಜೀವಿ ಪಾಲಕ ಇವರಿಗೆ ನೋಟಿಸ್‌ ಜಾರಿಗೊಳಿಸಿ 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಕೊಡೇರಿಯ ಕಿರು ಮೀನುಗಾರಿಕೆ ಬಂದರು ಸಮುದ್ರ ಹಾಗೂ ಎಡಮಾವಿನಹೊಳೆ ನದಿಯ 50 ಮೀಟರ್‌ ಅಂತರದಲ್ಲಿದೆ. ಇಲ್ಲಿ ಬಂದರು ಮಾಡುವುದು ಕರಾವಳಿ ನಿಯಂತ್ರಣ ವಲಯ (ಸಿಆರ್‌ಜೆಡ್‌) ನಿಯಮಗಳ ಸ್ಪಷ್ಟ ಉಲ್ಲಂಘನೆ. ಈ ಪ್ರದೇಶ ಸಿಆರ್‌ಜೆಡ್‌ ವಲಯ-1ರ ವ್ಯಾಪ್ತಿಗೆ ಬರಲಿದ್ದು, ಈ ಪ್ರದೇಶದಲ್ಲಿ ಸೇವೆ ಮತ್ತು ರಕ್ಷಣ ಕಾರ್ಯಾಚರಣೆ ಹೊರತುಪಡಿಸಿ ಬೇರೆ ಚಟುವಟಿಕೆ ನಡೆಸುವಂತಿಲ್ಲ. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡು ಕೊಳ್ಳದ ಹೊರತು ಈ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತಿಲ್ಲ. ಬಂದರಿನಿಂದ ಗ್ರಾಮದ ನೀರು ಕಲುಷಿತವಾಗಲಿದ್ದು, 10 ಸಾವಿರ ಮಂದಿಗೆ ಸಮಸ್ಯೆ ಎದುರಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next