ಹೈದರಾಬಾದ್: ಟಾಲಿವುಡ್ ನ ಜನಪ್ರಿಯ ನಟ ಪೋಸಾನಿ ಕೃಷ್ಣ ಮುರಳಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಪುಣೆಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ತೆರಳಿದ್ದ ಅವರು, ಇತ್ತೀಚೆಗೆ ಹೈದರಾಬಾದ್ ಗೆ ಮರಳಿದ್ದರು. ಈ ವೇಳೆ ಅವರ ಆರೋಗ್ಯ ಸ್ವಲ್ಪ ಹದಗೆಟ್ಟ ಪರಿಣಾಮ, ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಅದರಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಕೂಡಲೇ ಅವರು ಐಸೋಲೇಟ್ ಆಗಿದ್ದಾರೆ. ಆದರೆ ಕೆಲ ಸಮಯದ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Karnataka Election 2023: ಸಿಎಂ ಬಸವರಾಜ ಬೊಮ್ಮಾಯಿ ಉಮೇದುವಾರಿಕೆ ಸಲ್ಲಿಕೆ
ನಟ ಪೋಸಾನಿ ಕೃಷ್ಣ ಮುರಳಿ ಕೋವಿಡ್ ಕಾಣಿಸಿಕೊಳ್ಳುತ್ತಿರುವುದು ಇದು ಮೂರನೇ ಬಾರಿ. ಅವರ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವುದರ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ.
ಇತ್ತೀಚೆಗೆ ಪೋಸಾನಿ ಕೃಷ್ಣ ಮುರಳಿ ʼಮೀಟರ್ʼ, ಸಿದ್ಧಾರ್ಥ್ ಅವರ ʼ18 ಪೇಜಸ್ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ʼರಕ್ಷಣಾʼ, ʼಅಲ್ಲುದಾ ಮಜಕಾʼ, ʼಎವಡ್ರಾ ರೌಡಿʼ, ʼಬಾಬಿʼ ಮುಂತಾದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ನಟಿಸಿದ್ದಾರೆ.