ಜಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜನಾಂದೋಲನ ಕಾರ್ಯಕ್ರಮದ ಮೂಲಕ ಸೆಪ್ಟೆಂಬರ್ ಮಾಹೆಯಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಅಂಗವಾಗಿ ಪೋಷಣ್ ರಥದ ಮೂಲಕ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ವಿ. ಶಾಂತಮ್ಮ ಹೇಳಿದರು.
ಪಟ್ಟಣದ ಶ್ರೀ ಲಕ್ಷ್ಮಮ್ಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಮತ್ತು ಶಿಶು ಅಭಿವೃದ್ಧಿ ಯೋಜನಾಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಅಂಗವಾಗಿ ಪೋಷಣ್ ರಥಕ್ಕೆ ಚಾಲನೆನೀಡಿ ಅವರು ಮಾತನಾಡಿದರು.
ಒಂದು ತಿಂಗಳು ಕಾಲ ಪಟ್ಟಣಸೇರಿದಂತೆ ಹಳ್ಳಿ ಹಳ್ಳಿಗಳಲ್ಲಿ ಪೋಷಣ್ ರಥ ತೆರಳಿ ಜನ ಜಾಗೃತಿ ಮೂಡಿಸಲಿದ್ದು, ಗರ್ಭಿಣಿ ಮತ್ತು ಬಾಣಂತಿ ಸೇರಿದಂತೆ ಮಗುವಿನ ಉತ್ತಮ ಬೆಳವಣಿಗೆಯಾಗಲು ಹಸಿರು ತರಕಾರಿ ಮತ್ತು ಪೌಷ್ಟಿಕಾಂಶವುಳ್ಳನುಗ್ಗೆ, ಕರಿಬೇವು ಹಾಗೂಹಣ್ಣಿನ ಮರಗಳನ್ನು ತಮ್ಮ ಮನೆಯ ಆವರಣದಲ್ಲಿಬೆಳೆಸಬೇಕು. ಆಗ ನಿತ್ಯ ತಾಜಾ ಸೊಪ್ಪು ಮತ್ತು ತರಕಾರಿ ಸಿಗಲಿದೆ. ತಾಜಾ ಹಣ್ಣು,ತರಕಾರಿ ಮತ್ತು ಸೊಪ್ಪು ಸೇವನೆ ಮಾಡಿದರೆಹೆಚ್ಚು ವಿಟಮಿನ್ ಅಂಶ ಸಿಗುವುದರಿಂದಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಹಕಾರಿಯಾಗಲಿದೆ ಎಂದರು.
ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಬಾರದಂತೆ ಅಲ್ಬೆಂಡಜೋಲ್ ಮಾತ್ರೆಯನ್ನು ನೀಡಬೇಕು. ಆಗ ಮಗು ದಷ್ಟಪುಷ್ಟವಾಗಿ ಬೆಳೆಯಲಿದ್ದು ನಿಗದಿತ ಸಮಯಕ್ಕೆ ಲಸಿಕೆ ಹಾಕಿಸಿದರೆ ಅಂಗವೈಕಲ್ಯವನ್ನು ಹೋಗಲಾಡಿಸಬಹುದಾಗಿದೆ. ಗ್ರಾಮ ಮಟ್ಟದಲ್ಲಿ ಜನಪ್ರತಿ ನಿಧಿ ಗಳು ಅಂಗನವಾಡಿ ಕಾರ್ಯಕರ್ತರು ಮತ್ತು ಸಂಘ ಸಂಸ್ಥೆಗಳನ್ನು ಒಂದುಗೂಡಿಸಿ ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ಪೋಷಣ್ ಅಭಿಯಾನದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು. 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಮದುವೆ ಮಾಡದಂತೆ ಪೋಷಕರಿಗೆ ಅರಿವು ಮೂಡಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪೋಷಣ್ ಅಭಿಯಾನದ ಸಂಯೋಜಕ ಎಂ.ಎನ್. ಈಶ್ವರ್, ಧರ್ಮಣ್ಣ, ಮೇಲ್ವಿಚಾರಕಿ ಎಚ್.ವಿ. ಶಾಂತಮ್ಮ, ಟಿ. ಶಾಂತಮ್ಮ, ರೇಖಾ, ನಾಡಿಗರ್, ಶಶಿಕಲಾ, ರೇಣುಕಾ ರೆಡ್ಡಿ, ರಾಜು ಗಿರಡ್ಡಿ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಭಾಗ್ಯಮ್ಮ,ಲೀಲಾವತಿ, ಅನಿಲಮ್ಮ ಮತ್ತಿತರರು ಇದ್ದರು