Advertisement

ಪರಿಷತ್‌ ಸದಸ್ಯರಿಗೂ ಸ್ಥಾನ ನೀಡಿ

12:28 PM Oct 06, 2018 | Team Udayavani |

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಷತ್‌ ಸದಸ್ಯರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ. ರೇವಣ್ಣ ಹೇಳಿದ್ದಾರೆ.

Advertisement

 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್‌ ಇರುವ ರಾಜ್ಯಗಳಲ್ಲಿ ಮೇಲ್ಮನೆ ಸದಸ್ಯರಿಗೆ ಸಚಿವ ಸ್ಥಾನ ನೀಡಿ ಗೌರವ ಕೊಡಲಾಗಿದೆ. ಅದೇ ರೀತಿ ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಹಿರಿಯ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು. ಕೇವಲ ಮೇಜು ಕುಟ್ಟಿ ಗಲಾಟೆ ಮಾಡುವವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯರಿಗೆ ಸಚಿವ ಸ್ಥಾನ ನೀಡಿದರೆ, ವರಿಷ್ಠರ ನಂಬಿಕೆಯಂತೆ ಕೆಲಸ ಮಾಡುತ್ತೇವೆ. ನಾನೂ ಸಚಿವಾಕಾಂಕ್ಷಿಯಾಗಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನಿಂದ ಕುರುಬ ಸಮುದಾಯಕ್ಕೆ ಆದ್ಯತೆ ನೀಡಿಲ್ಲ. ಇಬ್ಬರು ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಎಂ.ಟಿ.ಬಿ. ನಾಗರಾಜ್‌, ಸಿ.ಎಸ್‌. ಶಿವಳ್ಳಿ ಅವರೂ ಸಚಿವಾಕಾಂಕ್ಷಿಗಳಾಗಿದ್ದಾರೆ. ಯಾರಿಗಾದರೂ ಇಬ್ಬರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ಸಿ ಓಟರ್ ಲೋಕಸಭೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿರುವುದು ನಿಜವಾಗುವುದಿಲ್ಲ. ಬಿಜೆಪಿ ಐದು ವರ್ಷದಲ್ಲಿ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಕಾಂಗ್ರೆಸ್‌ ಪಕ್ಷದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next