ಬೆಂಗಳೂರು: “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಾನು ಹಾಗೂ ಪ್ರಹ್ಲಾದ್ ಜೋಷಿ ಅವರು ಭೇಟಿಯಾಗಿ ವಿವರವಾಗಿ ಮಾಹಿತಿ ನೀಡಿದ್ದೇವೆ. ಪ್ರಧಾನಿಯವರೊಂದಿಗೆ ಮಾತನಾಡುವಾಗ ಅಮಿತ್ ಶಾ ಕೂಡ ಇದ್ದರು. ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ನನಗೆ ಅನಿಸುತ್ತಿದೆ. ಹೀಗಾಗಿ ಈಗ ಪರಿಹಾರ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ಬೆಳಗ್ಗೆ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇವೆ. ಗುರುವಾರ ಮಧ್ಯಾಹ್ನ ರಾಜ್ಯ ಕಂದಾಯ ಇಲಾಖೆ ಅಧಿಕಾರಿಗಳು ಕೇಂದ್ರ ಗೃಹ ಸಚಿವರೊಂದಿಗೆ ಚರ್ಚಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ರಾತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಆಗ ಯಾರಿಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು ಎಂದು ತಿಳಿಸಿದರು.
ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರೊಂದಿಗಿನ ವಾಕ್ಸಮರ ಬಗ್ಗೆ ಪ್ರತಿ ಕ್ರಿಯಿಸಿದ ಡಿ.ವಿ.ಸದಾನಂದಗೌಡ, ನಾನು ಅವರ ಹೆಸರು ಪ್ರಸ್ತಾಪಿಸಿಲ್ಲ. ಮಾಧ್ಯಮದಲ್ಲಿ ಅವರ ಹೆಸರು ಪ್ರಸ್ತಾಪಿಸಿದ್ದಾರೆಯೇ ಹೊರತು ನಾನಲ್ಲ. ಪುತ್ತೂರಿನ ಎ.ಸಿ. ಕಚೇರಿಯಲ್ಲಿ ಹಿಂದೆ “ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು- ಗಾಂಧೀಜಿ’ ಎಂದು ಬರೆದಿತ್ತು. ಅದನ್ನು ನಾನು ಹೇಳಿದ್ದೆ. ಇದನ್ನೇ ಪ್ರಶ್ನೆ ಮಾಡುತ್ತಾರೆ ಎನ್ನುವುದಾದರೆ ನಾನು ಏನನ್ನೂ ಹೇಳಲು ಹೋಗುವುದಿಲ್ಲ ಎಂದು ಹೇಳಿದರು.
ನಾನೂ ಏನನ್ನೂ ಹೇಳಲು ಬಯಸುವುದಿಲ್ಲ. ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಬಿಟ್ಟುಬಿಡಿ ಎಂದು ಈಗಾಗಲೇ ಹೇಳಿದ್ದೇನೆ. ಯಾರ ಹೇಳಿಕೆಗಳಿಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನೊಬ್ಬ ಜವಾಬ್ದಾರಿ ಯುತ ಕೇಂದ್ರ ಸಚಿವ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನ ತರುವುದು ನನ್ನ ಕೆಲಸ. ಮಾತಾ ಡುವವರು ಮಾತಾಡುತ್ತಲೇ ಇರಲಿ. ಕೆಲಸ ಮಾಡು ವವರು ಕೆಲಸ ಮಾಡುತ್ತಲೇ ಇರುತ್ತೇವೆ ಎಂದರು.