Advertisement

2.71 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ: ದೇಶದಲ್ಲಿ ಕಡಿಮೆಯಾಗುತ್ತಿದೆ ಪಾಸಿಟಿವಿಟಿ ದರ

10:10 AM Jan 16, 2022 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2.71 ಲಕ್ಷ ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಸಮಯದಲ್ಲಿ 314 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ದೇಶದಲ್ಲಿ ಪಾಸಿಟಿವಿಟಿ ದರ ಇಳಿಮುಖ ಕಂಡಿದ್ದು, ಸಮಾಧಾನಕ್ಕೆ ಕಾರಣವಾಗಿದೆ.

Advertisement

ಭಾನುವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,71,202 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಒಟ್ಟು 7,743 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರದಿಂದ ಶೇ.28.17ರಷ್ಟು ಹೆಚ್ಚಳವಾಗಿದೆ.

ಕಳೆದ 24 ಗಂಟೆಗಳಲ್ಲಿ ಕನಿಷ್ಠ 1,38,331 ರೋಗಿಗಳು ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,50,85,721 ಕ್ಕೆ ಏರಿಕೆಯಾಗಿದೆ. ಚೇತರಿಕೆಯ ಪ್ರಮಾಣವು ಈಗ 94.51 ಪ್ರತಿಶತದಷ್ಟಿದೆ.

ದೈನಂದಿನ ಪಾಸಿಟಿವಿಟಿ ದರವು ಶೇಕಡಾ 16.28 ರಷ್ಟಿದೆ. ಶನಿವಾರದ ಪಾಸಿಟಿವಿಟಿ ದರ 16.66 ರಷ್ಟಿತ್ತು. ವಾರದ ಪಾಸಿಟಿವಿಟಿ ರೇಟ್ ಶೇಕಡಾ 13.69 ರಷ್ಟಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು!

Advertisement

ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಆ ರಾಜ್ಯದಲ್ಲಿ 42,462 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದೇ ವೇಳೆ ಮಹಾರಾಷ್ಟ್ರದಲ್ಲೇ 125 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.

ಕರ್ನಾಟಕದಲ್ಲಿ 32,793 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ 22,281 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.15ರಷ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next