Advertisement

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ 20% ಸಮೀಪಕ್ಕೆ : ಇಂದು 13 ಸಾವು

07:59 PM Jan 16, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾನುವಾರ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಉಳಿದ ಭಾಗಗಳಲ್ಲಿ ಪ್ರಕರಣಗಳು ಹೆಚ್ಚಾದಂತೆ ರಾಜ್ಯದಲ್ಲಿ ಪಾಸಿಟಿವಿಟಿ ದರವು 19.29% ಕ್ಕೇರಿದೆ.

Advertisement

ಇಂದು ರಾಜ್ಯದಲ್ಲಿ 34,047 ಹೊಸ ಪ್ರಕರಣಗಳು ದೃಢ ಪಟ್ಟಿವೆ.ಬೆಂಗಳೂರಿನಲ್ಲಿ 21,017 ಹೊಸ ಪ್ರಕರಣಗಳು ದಾಖಲಾಗಿವೆ.

ಇಂದು ಒಟ್ಟು 5,902 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ 1,97,982 ಸಕ್ರಿಯ ಪ್ರಕರಣಗಳಿದ್ದು ,ಬೆಂಗಳೂರಿನಲ್ಲಿ ಕಳವಳಕಾರಿ ಎಂಬಂತೆ 1 ಲಕ್ಷದ 46 ಸಾವಿರ ಪ್ರಕರಣಗಳಿವೆ.

ಇಂದು 13 ಮಂದಿ ಸೋಂಕಿತರು ರಾಜ್ಯದಲ್ಲಿ ಬಲಿಯಾಗಿದ್ದು, ಆ ಪೈಕಿ 05 ಮರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಇಂದು 1,76,470 ಮಂದಿಗೆ ಪರೀಕ್ಷೆ ನಡೆಸಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next