Advertisement

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

09:54 AM Dec 29, 2019 | sudhir |

ಹುಬ್ಬಳ್ಳಿ: ಜನವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದಿಲ್ಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಿದ್ದು, ಸಂಕ್ರಾಂತಿ ಅನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ ಎಲ್ಲರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ.

ಯಾರನ್ನೂ ಕೈ ಬಿಡುವ ಪ್ರಶ್ನೆಯಿಲ್ಲ. ಎಂಟಿಬಿ ನಾಗರಾಜ್‌ ಮತ್ತು ವಿಶ್ವನಾಥ್‌ ಅವರು ಬಿಜೆಪಿ ಸರಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಅವರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಹೇಳಿದ್ದು, ಅವರಿಬ್ಬರಿಗೂ ಸಚಿವ ಸ್ಥಾನ ಸಿಗಬೇಕೆಂಬುದು ನನ್ನ ಒತ್ತಾಸೆಯಾಗಿದೆ ಎಂದರು.

ಝಾರ್ಖಂಡ್‌ ಚುನಾವಣೆ ಸಹಿತ ಹಲವು ಕಾರಣಗಳಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ನನಗೆ ಯಾವ ಖಾತೆ ನೀಡುತ್ತಾರೋ ಗೊತ್ತಿಲ್ಲ. ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next