Advertisement
ಗಂಗೊಳ್ಳಿಯಲ್ಲಿ ಆ.3ರ ಬಳಿಕವಷ್ಟೇ ಯಾಂತ್ರಿಕ ಮೀನುಗಾರಿಕೆ ಆರಂಭವಾಗುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಆಳ ಸಮುದ್ರ ಮೀನುಗಾರಿಕೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆದರೆ ಮೀನುಗಾರರಿಗೆ ಇನ್ನೂ ಸಹ ಲಸಿಕೆ ನೀಡಿಲ್ಲ. ಮಾಟು ಬಲೆ ದೋಣಿಯೊಂದರಲ್ಲೇ 30 ರಿಂದ 35 ಮೀನುಗಾರರು ಕೆಲಸ ಮಾಡುತ್ತಾರೆ. ಯಾಂತ್ರೀಕೃತ ದೋಣಿ, ಬೋಟು ಸೇರಿದಂತೆ ಸಾವಿರಾರು ಮೀನುಗಾರರು ಬಂದರಿನಲ್ಲಿ ಸೇರುತ್ತಾರೆ. ಕೊರೊನಾ 3ನೇ ಅಲೆಯ ಭೀತಿ ಈಗಲೇ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಇನ್ನೇನು ಯಾಂತ್ರಿಕ ಮೀನುಗಾರಿಕಾ ಋತು ಆರಂಭಗೊಳ್ಳಲಿದ್ದು, ಮೀನುಗಾರರಿಗೂ ಆದ್ಯತೆ ನೆಲೆಯಲ್ಲಿ ಲಸಿಕೆಗೆ ಅವಕಾಶ ಕಲ್ಪಿಸಿಕೊಡಬೇಕು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಮೀನುಗಾರಿಕಾ ಇಲಾಖೆ ಗಮನಹರಿಸಬೇಕು ಎನ್ನುವುದಾಗಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಆಗ್ರ ಹಿಸಿದ್ದಾರೆ.
ಗಂಗೊಳ್ಳಿಯಲ್ಲಿ ಬೋಟ್‌ಗಳು ಕಡಲಿಗಿಳಿಯುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ.2 ರಂದು ಈ ಬಗ್ಗೆ ಸಭೆ ನಿಗದಿಯಾಗಿದ್ದು, ಅಲ್ಲಿ ಚರ್ಚಿಸಿ ತೀರ್ಮಾನಿಸಲಿದ್ದೇವೆ. ಸಮುದ್ರ ತುಸು ಬಿರು ಸಾಗಿದ್ದು, ಡೀಸೆಲ್ ದರವೂ ದುಬಾರಿಯಾಗಿದೆ. ಹಾಗಾಗಿ ಎಲ್ಲ ಬೋಟ್‌ಗಳು ಈ ಬಾರಿ ಕಡಲಿಗಿಳಿಯುವುದು ಅನುಮಾನ. – ನಾರಾಯಣ ಖಾರ್ವಿ, ಅಧ್ಯಕ್ಷರು, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸಹಕಾರಿ ಸಂಘ
ಮೀನುಗಾರರಿಗೂ ಆದ್ಯತೆ ನೆಲೆಯಲ್ಲಿ ಲಸಿಕೆ ನೀಡುವುದು ಅತ್ಯವಶ್ಯಕವಾಗಿದ್ದು, ಈ ಬಗ್ಗೆ ನಾನು ನಮ್ಮ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಅವರು ಆರೊಗ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮಾತನಾಡಿದ್ದಾರೆ. ಆದಷ್ಟು ಬೇಗ ಲಸಿಕೆ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು. ಆ.2ರಂದು ಮಲ್ಪೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. – ಸುಮಲತಾ, ಸಹಾಯಕ ನಿರ್ದೇಶಕರು, ಮೀನುಗಾರಿಕಾ ಇಲಾಖೆ ಕುಂದಾಪುರ