Advertisement

ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್‌ ಕಾರ್ಡ್‌ ಚಳವಳಿ

06:16 PM Jul 10, 2021 | Suhan S |

ಶಿವಮೊಗ್ಗ: ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ನಗರದ ಗೋಪಿ ವೃತ್ತದಲ್ಲಿ ಪೋಸ್ಟ್‌ ಕಾರ್ಡ್‌ ಚಳವಳಿ ನಡೆಸಲಾಯಿತು.

Advertisement

ಜನ ಕೋವಿಡ್ ಅಲೆಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್‌ಡೌನ್‌ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ 2021 -22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಲಾಗಿದೆಂದು ಪ್ರತಿಭಟನಾಕಾರರು ದೂರಿದರು.

ಎಸ್‌ಆರ್‌ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕಾ ಕಟ್ಟಡಗಳು ಮತ್ತು ಖಾಲಿ ನಿವೇಶನಗಳಿಗೆ ಈ ಹಿಂದಿನ ವರ್ಷದ ತೆರಿಗೆ ಮೇಲೆ ಹಲವು ಪಟ್ಟು ಹೆಚ್ಚು ತೆರಿಗೆ ವಿಧಿಸಿ ಜನರ ಮೇಲೆ ಗದಾಪ್ರಹಾರ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಆಸ್ತಿ ತೆರಿಗೆ ಮೇಲೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಇದು ಏಕೆ ಸಾಧ್ಯವಾಗಿಲ್ಲ? ಎಸ್‌ಆರ್‌ ದರ ಆಧಾರಿತ ತೆರಿಗೆ ಕೈಬಿಡಿ. ತಿದ್ದುಪಡಿ ಮಸೂದೆ ಹಿಂದಕ್ಕೆ ಪಡೆದು ಶೇ.50 ರಷ್ಟು ವಿನಾಯಿತಿ ಘೋಷಿಸಬೇಕು. ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚಳವಾದ ಆಸ್ತಿ ತೆರಿಗೆ ಭರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ ಕಾರ್ಡ್‌ ನಲ್ಲಿ ಬರೆಯುವಂತೆ ಪ್ರತಿಭಟನಾಕಾರರು ಸಾರ್ವಜನಿಕರಿಗೆ ಮನವಿ ಮಾಡಿದರು.

ಒಕ್ಕೂಟದ ಪ್ರಮುಖರಾದ ಕೆ.ವಿ. ವಸಂತಕುಮಾರ್‌, ಡಾ|ಎನ್‌.ಎಲ್‌. ನಾಯಕ್‌, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌, ಡಿ.ಜಿ. ಮಂಜುನಾಥ್‌, ಸತೀಶ್‌ ಕುಮಾರ್‌ ಶೆಟ್ಟಿ, ಪುಷ್ಪಾ ಶೆಟ್ಟಿ, ಎಸ್‌.ಬಿ. ಅಶೋಕ್‌ ಕುಮಾರ್‌, ವಿಜಯಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next