Advertisement

ದಸರಾ ಬಳಿಕ ಉಪಚುನಾವಣೆ ಸಿದ್ಧತೆ ಚುರುಕು

11:57 PM Sep 28, 2019 | Team Udayavani |

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಪರಿಷ್ಕೃತ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಹಬ್ಬ ಕಳೆಯುತ್ತಿದ್ದಂತೆ ಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸಲು ಬಿಜೆಪಿ ಸಜ್ಜಾಗಿದೆ.

Advertisement

ಗುರುವಾರ ಮುಂದೂಡಿಕೆಯಾಗಿದ್ದ ಉಪಚುನಾವಣೆಗೆ ಹೊಸ ವೇಳಾಪಟ್ಟಿ ಶುಕ್ರವಾರ ಘೋಷಣೆಯಾಗಿದ್ದು, ನ. 11ರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಾಗಿ ಚುನಾವಣಾ ಚಟುವಟಿಕೆಗಳನ್ನು ಚುರುಕುಗೊಳಿಸುವುದರ ಜತೆಗೆ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯುವಂತೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಬಿಜೆಪಿ ಹಾಗೂ ಸರ್ಕಾರದ ಪ್ರಮುಖರು ಮುಂದಾಗಿದ್ದಾರೆ.

ಬಿಜೆಪಿ ಚುನಾವಣೆಯನ್ನು ಎದುರಿಸಲು ಸದಾ ಸಿದ್ಧವಿದೆ. ಬೂತ್‌ ಮಟ್ಟದ ಸಮಿತಿಗಳ ರಚನೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕಾರ್ಯಕರ್ತರನ್ನು ಉಪಚುನಾವಣೆಗೆ ಸಜ್ಜುಗೊಳಿಸಲಾಗುವುದು. ದಸರಾ ಹಬ್ಬ ಕಳೆದ ಬಳಿಕ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೂ ಉಸ್ತುವಾರಿಗಳ ನೇಮಕವಾಗಲಿದ್ದು, ಚುನಾವಣಾ ಕಾರ್ಯ ಚುರುಕುಗೊಳಿಸಲಾಗುವುದು. ಈಗಾಗಲೇ ಒಂದು ಹಂತದ ಸಿದ್ಧತಾ ಕಾರ್ಯ ನಡೆದಿದ್ದು, ಬಹುಪಾಲು ಕ್ಷೇತ್ರದಲ್ಲಿ ಗೆಲುವು ಸಾಧಿಸಲಾಗುವುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

ಉಪಚುನಾವಣೆ ಮುಂದೂಡಿಕೆಯಾಗಿರುವುದರಿಂದ ಅನರ್ಹಗೊಂಡ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಜನರೊಂದಿಗೆ ಹೆಚ್ಚು ವ್ಯವಹರಿಸಲು, ಅಭಿವೃದ್ಧಿ ಕಾರ್ಯಗಳತ್ತ ಮೇಲ್ವಿಚಾರಣೆ ನಡೆಸಲು ಅನುಕೂಲವಾದಂತಿದೆ. ಆ ಮೂಲಕ ಕ್ಷೇತ್ರದಲ್ಲಿ ಮತ್ತೆ ತಮ್ಮ ಹಿಡಿತವನ್ನು ಬಿಗಿಗೊಳಿಸುವತ್ತ ಗಮನ ಹರಿಸಲು ಚಿಂತಿಸಿದ್ದಾರೆ. ಒಂದೊಮ್ಮೆ ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಪರವಾಗಿ ತೀರ್ಪು ಬಂದರೆ ಬಿಜೆಪಿಯಿಂದಲೇ ಸ್ಪರ್ಧಿಸುವ ಉತ್ಸಾಹದಲ್ಲಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next