Advertisement

ಅಂಚೆ ನೌಕರರ ನಿಲ್ಲದ ಹೋರಾಟ

12:10 PM Aug 23, 2017 | Team Udayavani |

ಬೆಂಗಳೂರು: ವಿವಿಢ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಆ.16ರಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಬುದವಾರವೂ ಮುಂದುವರಿಯಲಿದೆ. ಪ್ರತಿಭಟನಾಕಾರರಿಗೆ ಈವರೆಗೂ ಸಂಬಂಧಪಟ್ಟ ಅಧಿಕಾರಿಗಳನ್ನಾಗಲಿ ಅಥವಾ ಕೇಂದ್ರ ಸಚಿವರನ್ನಾಗಲಿ ಭೇಟಿ ಮಾಡಲು ಸಾಧ್ಯವಾಗಿಲ್ಲ.

Advertisement

ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಭೇಟಿ ನೀಡಿ, ಗ್ರಾಮೀಣ ಅಂಚೆ ನೌಕರರ ಸಮಸ್ಯೆಯನ್ನು ಆಲಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆಯವರಿಗೂ ಈ ವಿಷಯವನ್ನು ಮನವರಿಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗಾರಾಜ್‌ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಅಂಚೆ ಸೇವಕರಿಗೆ ಕಮಲೇಶ್ಚಂದ್ರ ವರದಿಯ ಪ್ರಕಾರವೇ ವೇತನ ಹಾಗೂ ಸೌಲಭ್ಯ ಒದಗಿಸಿ, ಸೇವೆಯನ್ನು ಕಾಯಂ ಮಾಡಬೇಕು, ಪೆನ್ಸನ್‌, ಇನ್ಸೂರೆನ್ಸ್‌ ಸೇರಿದಂತೆ ವಿವಿಧ ಸೌಕರ್ಯ ನೀಡುವಂತೆ ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘವು ಹಮ್ಮಿಕೊಂಡಿರುವ ಪ್ರತಿಭಟನೆಗೆ ಪೂರಕವಾಗಿ ಕರ್ನಾಟಕದ ಘಟಕದಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ.

ಕಮಲೇಶ್ಚಂದ್ರ ವರದಿ ಅನುಷ್ಠಾನ ಮಾಡಿ, ನಮ್ಮ ಬೇಡಿಕೆ ಈಡೇರಿಸುವರೆಗೂ ಹೋರಾಟ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಎಸ್‌.ಎಸ್‌. ಮಹದೇವಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next