Advertisement

ರಾಜ್ ಠಾಕ್ರೆ ಎಚ್ಚರಿಕೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ

03:47 PM Apr 18, 2022 | Team Udayavani |

ಮುಂಬಯಿ : ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈ ಗೊಳ್ಳಲು ಮುಂದಾಗಿದೆ.

Advertisement

ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಸೋಮವಾರ, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಕಮಿಷನರ್ ಅವರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಿದ್ದು, ಅದನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.

“ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿಪಿ ಸಂಜಯ್ ಪಾಂಡೆ ಒಟ್ಟಿಗೆ ಕುಳಿತು ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಾರೆ. ಈ ಮಾರ್ಗಸೂಚಿಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಹೊರಡಿಸಲಾಗುವುದು. ಎಲ್ಲರೂ ಅವುಗಳನ್ನು ಕಾರ್ಯಗತಗೊಳಿಸಬೇಕು, ”ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ ಠಾಕ್ರೆ ಅವರು ಮೇ 3 ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಆಗ್ರಹಿಸಿದ್ದರು, ದೊಡ್ಡ ಧ್ವನಿಯಿಂದಾಗಿ ಇತರ ಸಮುದಾಯಗಳ ಸದಸ್ಯರು ಮುಸ್ಲಿಮರ ಪ್ರಾರ್ಥನೆಯನ್ನು ಕೇಳಲು ಇಷ್ಟವಿಲ್ಲ ಎಂದು ವಾದಿಸಿ ಮೇ 3ರ ನಂತರ ಹೆಚ್ಚಿನ ಪ್ರಮಾಣದಲ್ಲಿ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಮೊಳಗಿಸುಸುವುದಾಗಿ ಬೆದರಿಕೆ ಹಾಕಿದ್ದರು. ಇದು ಶಿವಸೇನೆಗೆ ಸವಾಲಾಗಿ ಪರಿಣಮಿಸಿ ರಾಜ್ ಠಾಕ್ರೆ ಹಿಂದೂ ಓವೈಸಿ ಎಂದು ಕರೆದಿತ್ತು.

Advertisement

Udayavani is now on Telegram. Click here to join our channel and stay updated with the latest news.