ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು
https://india postgdsonline.gov.in ಮೂಲಕ ಫೆ. 16ರ ಮೊದಲು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 05.06.2022ಕ್ಕೆ ಅನ್ವಯವಾಗುವಂತೆ 18ರಿಂದ 40 ವರ್ಷದ ವಯೋ ಮಿತಿಯೊಳಗಿರಬೇಕು. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ, ಒಬಿಸಿ ಅಂದರೆ ಇತರ ಹಿಂದುಳಿದ ವರ್ಗದವರಿಗೆ 3 ವರ್ಷದ ವಿನಾಯಿತಿ ಅನ್ವಯಿಸುತ್ತದೆ. ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸಂಬಂಧ ಪಟ್ಟ ಅಂಗವಿಕಲರಿಗೆ ಒಟ್ಟು 13 ವರ್ಷ ಹಾಗೂ ಪರಿಶಿಷ್ಟ ಜಾತಿ / ವರ್ಗಗಳಿಗೆ ಸಂಬಂಧಪಟ್ಟ ಅಂಗವಿಕಲರಿಗೆ 15 ವರ್ಷಗಳ ಸಡಿಲಿಕೆ ಇರುತ್ತದೆ.
ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10ನೇ ತರಗತಿಯಲ್ಲಿ ಅಧ್ಯಯನ ಮಾಡಿರಬೇಕು. ಕಾಸರ ಗೋಡು ಜಿಲ್ಲೆಯಲ್ಲಿ ಕನ್ನಡ ಒಂದು ವಿಷಯ ವಾಗಿ ಅಧ್ಯಯನ ನಡೆಸಿ ದವರೂ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳು
https://indiapost.gov.in ಅಥವಾ
https://indiapostgdsonline.gov.in ನಲ್ಲಿ ಲಭ್ಯವಿವೆ ಎಂದು ತಿಳಿಸಿದ್ದಾರೆ.