Advertisement

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

07:41 PM Jan 01, 2025 | Team Udayavani |

ಬೆಂಗಳೂರು: ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆ (priyank Kharge) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪೋಸ್ಟರ್‌ ಆಂದೋಲನ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್‌  ಪ್ರತ್ಯಾರೋಪದ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಮಂದಿ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Advertisement

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಮಂಗಳವಾರ ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯ ಸಾರ್ವಜನಿಕ ಶೌಚಾಲಯದ ಗೋಡೆಗೆ ಸಚಿವರ ರಾಜೀನಾಮೆಗೆ ಒತ್ತಾಯಿಸುವ ಜೊತೆಗೆ, ಸುಫಾರಿ ಭಾಗ್ಯ ನೀಡಿದ ಕಾಂಗ್ರೆಸ್​ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಅಂಟಿಸಿದ್ದರು. ಆ ಮೂಲಕ ಬೆಂಗಳೂರು ನಗರದ ಸೌಂದರ್ಯಕ್ಕೂ ಧಕ್ಕೆ ತರುವಂತೆ ಅಂಟಿಸುತ್ತಿದ್ದದ್ದು ಕಂಡು ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾ‌ನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧದ ದೂರು ಆಧರಿಸಿ ಪಿಎಸ್ಐ ಶಶಿಧರ ವಣ್ಣೂರ ಎಫ್ಐಆರ್ ದಾಖಲಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.


ಕಲಬುರಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಅಂತಾ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡು ಬಿಟ್ಟಿದ್ದಾರೆ ಅಂತಾ ಸಿ.ಟಿ ರವಿ ಹರಿಹಾಯ್ದಿದ್ದಾರೆ. ಇನ್ನು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ವಿಶ್ವಕರ್ಮ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next