Advertisement

ಆದಿತ್ಯ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ; ವರ್ಲಿಯಲ್ಲಿ ಪೋಸ್ಟರ್ ಅಬ್ಬರ!

09:44 AM Oct 26, 2019 | Nagendra Trasi |

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಶಿವಸೇನಾ ಮುಖಂಡ ಆದಿತ್ಯ ಠಾಕ್ರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂಬ ಪೋಸ್ಟರ್ , ಬ್ಯಾನರ್ ಗಳು ಆದಿತ್ಯಠಾಕ್ರೆಯ ವರ್ಲಿ ಕ್ಷೇತ್ರದಲ್ಲಿ ರಾರಾಜಿಸುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಹನುಮಾನ್ ಸೇವಾ ಮಂಡಲ್ ಹಾಕಿರುವ ಪೋಸ್ಟರ್ ನಲ್ಲಿ ಶಿವಸೇನಾ ಸ್ಥಾಪಕ ಬಾಳ್ ಠಾಕ್ರೆ ಮತ್ತು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಫೋಟೋ ಜತೆ ಆದಿತ್ಯ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ. ಠಾಕ್ರೆ ಕುಟುಂಬದ ಇತಿಹಾಸದಲ್ಲಿಯೇ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸಿರುವ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ 29ರ ಹರೆಯದ ಆದಿತ್ಯ ಠಾಕ್ರೆ ಅವರದ್ದಾಗಿದೆ.

ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಎನ್ ಸಿಪಿಯ ಸುರೇಶ್ ಮಾನೆಯನ್ನು ಭರ್ಜರಿ 70 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಆದಿತ್ಯ ಠಾಕ್ರೆ ಮೊದಲ ಪ್ರಯತ್ನದಲ್ಲಿಯೇ ಜಯ ಸಾಧಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಕಣಕ್ಕಿಳಿದಿತ್ತು. ಬಿಜೆಪಿ 105, ಶಿವಸೇನಾ 56 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next