Advertisement
ಮುರುಘಾರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ಮಂಗಳವಾರ ಬಸವ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ದಿ.ಪುನೀತ್ ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುರಸ್ಕಾರ ಸ್ವೀಕರಿಸಿದರು.
Related Articles
Advertisement
ಇದನ್ನೂ ಓದಿ:ರಾಜ್ಯ ಮಟ್ಟದ ಬಸವ ಜಯಂತಿ ಕಾರ್ಯಕ್ರಮಕ್ಕೆ ಸಚಿವರ ಗೈರು: ಸ್ಥಳೀಯರ ಆಕ್ರೋಶ
ಸಾಹಿತಿ ಡಾ.ರಾಜಪ್ಪ ದಳವಾಯಿ ಮಾತನಾಡಿ, ಪುನೀತ್ ಅವರ ವಿಚಾರದಲ್ಲಿ ಈ ನಾಡು ಎಂದೂ ಅಭಿಮಾನ ಶೂನ್ಯ ಅಲ್ಲ ಎಂಬುದನ್ನು ತೋರಿಸಿದೆ. 25 ಲಕ್ಷಕ್ಕೂ ಹೆಚ್ಚು ಜನ ಅವರ ಸಾವಿನಿಂದ ದುಃಖಿತರಾಗಿದ್ದಾರೆ. ಕರ್ನಾಟಕದ ಮಠ ಪರಂಪರೆಯಲ್ಲಿ ಮುರುಘಾ ಮಠ ಎಷ್ಟು ಮುಖ್ಯವೋ, ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ಕುಟುಂಬ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ಚಲನಚಿತ್ರ ನಿರ್ಮಾಪಕ ಚಿನ್ನೇಗೌಡ, ಸಾಹಿತಿ ರಾಜಪ್ಪ ದಳವಾಯಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂಎಲ್ಸಿ ಕೆ.ಎಸ್.ನವೀನ್, ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಕೆ.ಪರಶುರಾಮ್, ಜಿಪಂ ಸಿಇಒ ಡಾ.ನಂದಿನಿದೇವಿ ಇದ್ದರು.