Advertisement

ಪುನೀತ್ ರಾಜಕುಮಾರ್ ಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್

01:09 PM Mar 13, 2022 | Team Udayavani |

ಮೈಸೂರು: ದಿವಂಗತ ನಟ ಪುನೀತ್ ರಾಜಕುಮಾರ್ ರವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ

Advertisement

ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮೈಸೂರು ವಿವಿಯಿಂದ ಈ ಮುಖೇನ ಉಡುಗೊರೆ ನೀಡಲಾಗುತ್ತಿದೆ. ಪುನೀತ್ ರಾಜಕುಮಾರ್ ಕುಟುಂಬದವರನ್ನು ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿಯವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ ಹೇಮಂತ್ ಕುಮಾರ್ ಘೋಷಣೆ ಮಾಡಿದರು.

ಮಾರ್ಚ 22 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ದಿನ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ ಗೆ ಮರಣೋತ್ತರ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ ವಿ.ಎಸ್. ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದರು.

ಇದನ್ನೂ ಓದಿ:ಕಳೆದು ಹೋಗಿದ್ದ ಪುತ್ರನನ್ನು ಹುಡುಕಿಕೊಟ್ಟ ಆಧಾರ್‌: 6 ವರ್ಷದ ಬಳಿಕ ಅಮ್ಮನ ಮಡಿಲು ಸೇರಿದ ಮಗ

ಘಟಿಕೋತ್ಸವದಂದು 28581 ಅಭ್ಯರ್ಥಿಗಳಿಗೆ ಪದವಿ ಪ್ರದಾನ, 5677 ಅಭ್ಯರ್ಥಿ ಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು. ವಿವಿಧ ಅಭ್ಯರ್ಥಿಗಳು ಚಿನ್ನದ ಪದಕ‌ ಇತರೆ ಬಹುಮಾನ ಪಡೆದಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಎಸ್ ಸಿ ಶರ್ಮಾ ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕುಲಪತಿ ಪ್ರೋ ಹೇಮಂತ್ ಕುಮಾರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next