ನವದೆಹಲಿ: ಕೋವಿಡ್ ನಿಯಮವನ್ನು ಪಾಲಿಸಿ ಇಲ್ಲದಿದ್ರೆ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಹುಲ್ ಗಾಂಧಿ ಅವರಿಗೆ ಪತ್ರದ ಮೂಲಕ ಹೇಳಿದ್ದಾರೆ.
ಚೀನದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗುತ್ತಿದ್ದಾರೆ. ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದು ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಯಾತ್ರೆಯಲ್ಲಿ ಪಾಲಿಸಿ. ಕೋವಿಡ್ ಲಸಿಕೆಯನ್ನು ಪಡೆದುಕೊಂಡವವರು ಮಾತ್ರ ಯಾತ್ರೆಯಲ್ಲಿ ಪಾಲ್ಗೊಳ್ಳಿ. ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದನ್ನು ಮಾತ್ರ ಮರೆಯಬೇಡಿ. ದಯವಿಟ್ಟು ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮವನ್ನು ಅನುಸರಿಸಿ ಇಲ್ಲದಿದ್ರೆ ಯಾತ್ರೆಯನ್ನು ಜನರ ಆರೋಗ್ಯದ ದೃಷ್ಟಿಯಿಂದ ಮುಂದೂಡಿ ಎಂದು ಪತ್ರದಲ್ಲಿ ಕೇಂದ್ರ ಸಚಿವರು ಹೇಳಿದ್ದಾರೆ.
ಸೆ.7 ರಿಂದ ಕನ್ಯಾಕುಮಾರಿಯಿಂದ ಆರಂಭವಾದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಬುಧವಾರ ಹರಿಯಾಣಕ್ಕೆ ಬಂದು ತಲುಪಿದೆ. ಇದುವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ,ಮಧ್ಯ ಪ್ರದೇಶ,ಮಹಾರಾಷ್ಟ್ರ ಹಾಗೂ ರಾಜಸ್ಥಾನ ರಾಜ್ಯದಲ್ಲಿ ಜೋಡೋ ಯಾತ್ರೆಯನ್ನು ಮುಗಿಸಿದೆ. ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯ ಆಗಲಿದೆ.