Advertisement
ರಂಜಾನ್ ದಿನದಂದು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಸಚಿವಾಕಾಂಕ್ಷಿಗಳು ಹೆಚ್ಚಾಗಿದ್ದರಿಂದ ಸಂಪುಟ ವಿಸ್ತರಣೆ ಮಾಡಿದರೂ ಕಷ್ಟ, ಪುನಾರಚನೆ ಮಾಡಿದರೂ ಕಷ್ಟ ಎಂಬ ಸ್ಥಿತಿ ನಿರ್ಮಾಣವಾದ ಕಾರಣ ಸದ್ಯಕ್ಕೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಹೀಗಾಗಿ, ಸಚಿವರಾಗಲು ಕಾಯುತ್ತಿದ್ದವರು ತಮ್ಮಲ್ಲಿನ ಕೋಪ ಹೊರ ಹಾಕುತ್ತಿದ್ದಾರೆ.
Related Articles
Advertisement
ಎಚ್.ಕೆ.ಪಾಟೀಲ್ ವಾದ ಏನು?: ಈಗಿನ ಸ್ಥಿತಿಯಲ್ಲಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆ ನೀಗಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾvಬೇಕು. ಇಲ್ಲದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು.
ಪ್ರಮುಖವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧವೇ ರೋಷನ್ ಬೇಗ್ ಸೇರಿದಂತೆ ಅನೇಕ ನಾಯಕರು ಆರೋಪ ಮಾಡಿರುವುದರಿಂದ ರಾಹುಲ್ ಗಾಂಧಿಯೇ ಮಧ್ಯ ಪ್ರವೇಶ ಮಾಡಬೇಕು. ಎಲ್ಲ ಹಿರಿಯ ನಾಯಕರನ್ನು ಕರೆದು ರಾಹುಲ್ ಅವರೇ ಆಂತರಿಕ ಗೊಂದಲ ನಿವಾರಣೆ ಮಾಡಬೇಕು ಎಂಬುದು ಅವರ ವಾದ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿರುವ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ರೋಷನ್‌ಬೇಗ್, ಡಾ.ಸುಧಾಕರ್ ಹೇಳಿಕೆಗಳನ್ನು ಗಮನಿಸಿದ್ದೇನೆ. ಹಿರಿಯ ನಾಯಕರು ಅಸಮಾಧಾನ ಹೊರ ಹಾಕುತ್ತಿರುವಾಗ ಹೈ ಕಮಾಂಡ್ ಮಧ್ಯ ಪ್ರವೇಶ ಮಾಡಬೇಕು. ಸಂಪುಟ ವಿಸ್ತರಣೆಗೆ ವಿರೋಧ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿರುದ್ಧವೇ ಕೆಲವು ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಶೀಘ್ರವೇ ರಾಹುಲ್ ಗಾಂಧಿ ರಾಜ್ಯ ನಾಯಕರ ಸಭೆ ಕರೆದು ಸಮಸ್ಯೆಗೆ ಪರಿಹಾರ ಸೂಚಿಸಬೇಕು ಎಂದು ಹೇಳಿದ್ದಾರೆ.
ಪಕ್ಷ ಎಲ್ಲ ಕಡೆಯೂ ಸೋತಿದೆ. ಈ ಸಂದರ್ಭದಲ್ಲಿ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಸೋಲಿಗೆ ನಾನು ಯಾರನ್ನೋ ಒಬ್ಬರನ್ನು ಹೊಣೆ ಮಾಡಲು ಹೋಗುವುದಿಲ್ಲ. ಸಿದ್ದರಾಮಯ್ಯ ಪಕ್ಷದ ನಾಯಕರಿದ್ದಾರೆ. ಅವರೊಬ್ಬರನ್ನೇ ದೂಷಿಸುವುದಿಲ್ಲ. ಎಲ್ಲದರ ಬಗ್ಗೆಯೂ ಹೈ ಕಮಾಂಡ್ ಚರ್ಚಿಸಬೇಕು ಎಂದು ತಿಳಿಸಿದ್ದಾರೆ.
ರೆಡ್ಡಿಗೆ ಸಚಿವ ಸ್ಥಾನಬಂಡಾಯದ ಬಿಸಿ ಎದುರಿಸಿರುವ ಸಿದ್ದರಾಮಯ್ಯ ಅವರು ಸಿ.ಎಸ್. ಶಿವಳ್ಳಿ ನಿಧನದಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ರಾಮಲಿಂಗಾ ರೆಡ್ಡಿ ಅವರಿಗೆ ನೀಡುತ್ತೇವೆ ಎಂದಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತದೆ. ರೋಷನ್ ಬೇಗ್ ಬಗ್ಗೆ ಮಾತನಾಡಲ್ಲ. ವಿಶ್ವನಾಥ್ ಬಗ್ಗೆಯೂ ಮಾತನಾಡುವುದಿಲ್ಲ, ಅವರು ನಮ್ಮ ಪಕ್ಷದವರೂ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.