ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಾಳೆ (ಸೆ. 08) ರಂದು ನಡೆಯಬೇಕಾಗಿದ್ದ ಬೃಹತ್ ಜನೋತ್ಸವ ಸಮಾವೇಶವನ್ನು ಸರಕಾರ ಭಾನುವಾರಕ್ಕೆ ಮುಂದೂಡಿದೆ.
ಸಚಿವ ಮುನಿರತ್ನ ಸುದ್ದಿಗಾರರಿಗೆ ಈ ವಿಚಾರವನ್ನು ತಿಳಿಸಿದ್ದು, ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11, ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಕತ್ತಿಯವರ ಕುಟುಂಬದ ದು:ಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಬಹಳ ನೋವಿನ ಸಂಗತಿ ಇದು.ನಾವೆಲ್ಲ ಶೋಕದಲ್ಲಿದ್ದೇವೆ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ಜನೋತ್ಸವ ನಡೆಸುವುದಿಲ್ಲ ಎಂದು ಹೇಳಿದ್ದಾರೆ.
ಜನೋತ್ಸವ ಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಯಾದಾಗ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.