Advertisement

ಮಳೆ ಹಿನ್ನೆಲೆ: ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ: ಎಚ್‌ಡಿಕೆ

09:30 PM Dec 10, 2022 | Team Udayavani |

ಬೆಂಗಳೂರು: ಮಳೆ ಹಿನ್ನೆಲೆಯಲ್ಲಿ ಎರಡನೇ ಹಂತದ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಮುಂದೂಡಲಾಗಿದೆ.

Advertisement

ಹವಾಮಾನ ಇಲಾಖೆ ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ನಾಲ್ಕು ದಿನ ಮಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ರಥಯಾತ್ರೆಯ ದಿನಾಂಕವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆ ಹಿನ್ನೆಲೆಯಲ್ಲಿ ಡಿಸೆಂಬರ್‌ 15ರಂದು ಮಾಗಡಿಯಲ್ಲಿ ರಥಯಾತ್ರೆ ಆರಂಭವಾಗಿ ಡಿಸೆಂಬರ್‌ 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ.27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್‌ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಜತೆಗೆ ಡಿ.15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಾಗಲಿದೆ.

Advertisement

ಡಿಸೆಂಬರ್‌ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ತಲುಪಲಿದ್ದು ಡಿ.20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್‌.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next