Advertisement

ನಾಳೆ ನಡೆಯಬೇಕಿದ್ದ KSET ಪರೀಕ್ಷೆ ಮುಂದೂಡಿಕೆ

02:32 PM Apr 10, 2021 | Team Udayavani |

ಮೈಸೂರು : ಮೈಸೂರು ವಿಶ್ವ ವಿದ್ಯಾಲಯ ನಾಳೆ ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಅನ್ನು ಮುಂದೂಡಿಕೆ ಮಾಡಿ ಶನಿವಾರ ಪ್ರಕಟಣೆ ಹೊರಡಿಸಿದೆ.

Advertisement

ಸದ್ಯ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೆಸೆಟ್ ಪರೀಕ್ಷೆಯ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಮಾಡಲಾಗುವುದಾಗಿಯೂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ ಮುಷ್ಕರ ಶುರುವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿವಿ, ಮೈಸೂರು ವಿವಿ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಭಾನುವಾರ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಕೊಂಡಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next