Advertisement

ಏನಾಗಲಿದೆ ಭವಿಷ್ಯ; ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೆಲಕಾಲ ಮುಂದೂಡಿಕೆ

01:23 PM Sep 23, 2019 | Team Udayavani |

ನವದೆಹಲಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ತೀರ್ಪಿನ ಮೇಲೆ ಚಿತ್ತ ನೆಟ್ಟಿದ್ದ ಅನರ್ಹ ಶಾಸಕರ ಭವಿಷ್ಯ ಏನಾಗಲಿದೆ ಎಂಬುದು ತಿಳಿಯಲಿದೆ.

Advertisement

ಸ್ಪೀಕರ್ ಅವರ ಅನರ್ಹತೆ ಆದೇಶವನ್ನು ಪ್ರಶ್ನಿಸಿ 17 ಮಂದಿ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೋಮವಾರ ನ್ಯಾ. ಎನ್ .ವಿ.ರಮಣ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಿತು.

ಶಾಸಕರ ರಾಜೀನಾಮೆ ಸ್ವೀಕರಿಸಿಲ್ಲ, ಸ್ಪೀಕರ್ ಅನರ್ಹಗೊಳಿಸಿ ಆದೇಶ ನೀಡಿದ್ದಾರೆ. ಈಗ ಉಪ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕಾಗಿದೆ ಎಂದು ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ವಾದಿಸಿದರು.

ಕರ್ನಾಟಕದ ಉಪಚುನಾವಣೆಗೆ ತಡೆ ನೀಡಬೇಕಾಗಿದೆ ಎಂದು ರೋಹ್ಟಗಿ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ತುರ್ತು ವಿಚಾರಣೆ ಅಗತ್ಯವಿದೆ ಎಂದು ವಾದಿಸಿದರು.

ಏತನ್ಮಧ್ಯೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಬಾರದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಒಂದು ಗಂಟೆ ಕಾಲ ಸುಪ್ರೀಂ ಪೀಠ ಮುಂದೂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next